ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಪ್ರಶಾಂತ್ (37) ಎಂಬವರು ಜೂನ್ 25 ರಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ನೂರಾಳ್ ಬೆಟ್ಟು ಗ್ರಾಮದ ಮುಳ್ಳಿಕಾರು, ಪಂಜಿಲ ಮನೆ ನಿವಾಸಿ ಮೃತ ಪ್ರಶಾಂತ್ ಜೂನ್ 23 ರಂದು ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ಹೋದವರು ಸಂಜೆ ವೇಳೆ ಸಂಬಂಧಿಯೊಬ್ಬರಿಗೆ ವಿಷ ಸೇವಿಸಿರುವುದಾಗಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿದ ಸಂಬಂಧಿಕ ಹಾಗು ಮೃತರ ಸಹೋದರ ಪ್ರಶಾಂತ್ ರವರನ್ನು ನಿಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ 25 ರಂದು ಅರೋಗ್ಯ ಸ್ಥಿತಿಯಲ್ಲಿ ತೀವ್ರ ಏರುಪೇರಾದ ಕಾರಣ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮೃತರ ಸಹೋದರ ನೀಡಿರುವ ದೂರಿನ ಮೇರೆಗೆ ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.