ರೋಟರಿ ಜಿಲ್ಲಾಮಟ್ಟದ ಪ್ರಾಜೆಕ್ಟ್ ಆಗಿರುವ ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಜುಲೈ ೧೦ ರಂದು NMAMIT ವಿದ್ಯಾ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ MCA ವಿಭಾಗದ ಪ್ರಾಧ್ಯಾಪಕ ಡಾ. ಸುರೇಂದ್ರ ಶೆಟ್ಟಿ “ವನಮಹೋತ್ಸವದ ಮಹತ್ವ ಮತ್ತು ಪರಿಸರ ಸಂರಕ್ಷಣೆಯಲ್ಲಿ ನಮ್ಮ ಪಾತ್ರ” ಎಂಬ ವಿಷಯದ ಕುರಿತು ವಿಸ್ತೃತ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. ಡಾ. ರಘುನಂದನ್ ಅವರು ವಹಿಸಿ, ಸಭೆಗೆ ಆಗಮಿಸಿದ್ದ ಅತಿಥಿಗಳನ್ನು ಹಾಗೂ ಸಭಿಕರನ್ನು ಪರಿಚಯಿಸಿದರು.ಸಭೆಯು ಶಿಕ್ಷಕರು ಮತ್ತು ರೋಟರಿ ಕ್ಲಬ್ ನ ಸದಸ್ಯರ ಸಕ್ರಿಯ ಭಾಗವಹಿಸುವಿಕೆಯಿಂದ ಅತ್ಯಂತ ಯಶಸ್ವಿಯಾಗಿ ನಡೆಯಿತು.ಸಭೆಯ ಅಂತ್ಯದಲ್ಲಿ ಕಾರ್ಯದರ್ಶಿ ರೊ. ಶೈಲಜ ವಿ ಶೆಟ್ಟಿ ಅವರು ಧನ್ಯವಾದಗಳನ್ನು ಸಲ್ಲಿಸಿದರು.