ಕಾರ್ಕಳ: ಅಕ್ರಮ ಕಲ್ಲುಕೋರೆ ಮೇಲೆ ಪೊಲೀಸ್ ದಾಳಿ
ಖಚಿತ ಮಾಹಿತಿ ಮೇರೆಗೆ ಕಾರ್ಕಳ ಪೊಲೀಸ್ ಉಪ ನಿರೀಕ್ಷಕ ಶಿವಕುಮಾರ್ ಎಸ್.ಆರ್ ಹಾಗೂ ಸಿಬ್ಬಂದಿಗಳು ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಎಂಬಲ್ಲಿ ಪರವಾನಿಗೆ ಇಲ್ಲದೆ ನಡೆಯುತ್ತಿದ್ದಗಣಿಕಾರಿಕೆ ಪ್ರದೇಶಕ್ಕೆ ದಾಳಿ ನಡೆಸಿದ್ದಾರೆ.
ಅಕ್ರಮವಾಗಿ ಕಲ್ಲು ಗಣಿಕಾರಿಕೆ ನಡೆಸುತ್ತಿದ್ದ ಜಾಗದ ಮಾಲೀಕ ಸುಧಾಕರ,ಲಾರಿ ಮಾಲೀಕ ಹಾಗೂ ಚಾಲಕನ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣಾ ಯಲ್ಲಿ ಪ್ರಕರಣ ದಾಖಲಾಗಿದೆ.