ನಾಥಪಂಥ ಅಲೆಮಾರಿ ಜೋಗಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಹಾಗೂ ಉಡುಪಿ ಕಾರ್ಕಳ ಘಟಕದ ಜೋಗಿ ಸಮಾಜ ಸೇವಾ ಸಮಿತಿ ಮತ್ತು ಉಡುಪಿಯ ಜೋಗಿ ವಿವಿದೋದ್ದೇಶ ಸಹಕಾರಿ ಸಂಘ ನಿಯಮಿತ ಇದರ ಸಹಯೋಗದೊಂದಿಗೆ ಜನಪದ ವೈಭವ ಎಂಬ ರಾಜ್ಯ ಮಟ್ಟದ ಸಾಮೂಹಿಕ ಜನಪದ ನೃತ್ಯ ಸ್ಪರ್ಧೆಯು ಜುಲೈ 13 ರಂದು ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
ಬೆಳಗ್ಗೆ 9.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಸಭಾ ಉದ್ಘಾಟನೆಯನ್ನು ನೆರವೇರಿಸಿಕೊಡಲಿದ್ದಾರೆ.