
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ರಜತ ಸಂಭ್ರಮದ ಸವಿನೆನಪಿಗಾಗಿ ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಡುವ ಕಾರ್ಯಕ್ಕೆ ಈಗಾಗಲೇ ಮುಂದಾಗಿದ್ದು, ಮನೆಯ ಮೇಲ್ಚಾವಣಿ ಸಂಪೂರ್ಣ ವೆಚ್ಚವನ್ನು ಕಾರ್ಕಳ ಕಾಂಗ್ರೆಸ್ ಮುಖಂಡ, ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಮುನಿಯಾಲು ಉದಯ ಶೆಟ್ಟಿ ಭರಿಸಿ ಸಮಾಜದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಇತ್ತೀಚಿಗೆ ಬೋಳ ಮೈಂದ್ಕಲ್ ಬಳಿಯ ಆರ್ಥಿಕವಾಗಿ ಅಸಹಾಯಕರಾಗಿರುವ ಕುಟುಂಬದ ಮನೆಗೆ ಉದಯ ಶೆಟ್ಟಿಯವರು ಭೇಟಿ ನೀಡಿದ್ದು, ನಿರ್ಮಾಣ ಹಂತದ ಮನೆ ಪರಿಶೀಲಿಸಿ, ಮನೆ ನಿರ್ಮಾಣಕ್ಕೆ ಸಹಾಯ ಮಾಡುವ ಭರವಸೆ ನೀಡಿದ್ದರು. ಅದರಂತೆಯೇ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದಲ್ಲಿ ಮೇಲ್ಛಾವಣಿಗೆ ಬೇಕಾದ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ.












