ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹೆಬ್ರಿ ತಾಲ್ಲೂಕು, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ, ಅಧ್ಯಕ್ಷರು/ಸದಸ್ಯರು ಗ್ರಾಮ ಪಂಚಾಯತ್ ವರಂಗ, ಲಯನ್ಸ್ ಕ್ಲಬ್ ಮುನಿಯಾಲು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘ ಪಡುಕುಡೂರು, ಹಾಲು ಉತ್ಪಾದಕರ ಸಹಕಾರಿ ಸಂಘ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಡು ಕುಡೂರು ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ ಹಾಗೂ ಉಚಿತ ನೇತ್ರತಪಾಸಣೆ ಶಸ್ತ್ರ ಚಿಕಿತ್ಸಾಶಿಬಿರ ವನ್ನು ಪಡುಕುಡೂರು ಶಾಲೆಯಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮುನಿಯಲು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ಭುಜಂಗ ಶೆಟ್ಟಿ ಅವರು ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮೆಚ್ಚಿದ ವ್ಯಕ್ತಪಡಿಸಿದರು. ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಸಂಚಾಲಕರಾದ ಶ್ರೀ ಶಂಕರ ಶೆಟ್ಟಿಯವರು ಟ್ರಸ್ಟ್ ನ ಪರಿಚಯ ಹಾಗೂ ಅಲ್ಲಿಯ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು ಹೆಬ್ರಿ ತಾಲೂಕು ಯೋಜನಾಧಿಕಾರಿಯಾಗಿರುವ ಶ್ರೀಮತಿ ಲೀಲಾವತಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತಾರಾವತಿ, ಮುದ್ರಾಡಿ ವಲಯದ ಜನಜಾಗೃತಿ ಸದಸ್ಯರಾದ ಶ್ರೀ ಗೋಪಿನಾಥ್ ಭಟ್, ಪಡುಕುಡೂರು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಹರೀಶ್ ಎಸ್ ಪೂಜಾರಿ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಆಚಾರ್ಯ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ರವಿ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಪ್ರಸನ್ನ ಶೆಟ್ಟಿ. ಪಡುಕುಡೂರು ಉದ್ಯಮಿ ಶ್ರೀ ಹರೀಶ್ ಶೆಟ್ಟಿ ಶೆಟ್ಟಿ, ಲಯನ್ಸ್ ಸದಸ್ಯರಾದ ಶ್ರೀ ಅಶೋಕ್ ಶೆಟ್ಟಿ,ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಹೆಗ್ಡೆ, ಮುದ್ರಾಡಿ ವಲಯದ ಅಧ್ಯಕ್ಷರಾದ ಶ್ರೀ ಯೋಗೀಶ್, ಒಕ್ಕೂಟದ ಅಧ್ಯಕ್ಷರಾದ ಶ್ರೀ ಹೃದಯ ಶೆಟ್ಟಿ, ಶೌರ್ಯ ವಿಪತ್ತು ಘಟಕದ ಅಧ್ಯಕ್ಷರಾದ ಶ್ರೀ ಶಂಕರ್ ಶೆಟ್ಟಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಜ್ಞಾನವಿಕಾಸ ಕೇಂದ್ರದ ದಾಖಲಾತಿಯನ್ನು ಯೋಜನಾಧಿಕಾರಿ ಶ್ರೀಮತಿ ಲೀಲಾವತಿಯವರು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಸುಮಾರು 170 ಮಂದಿ ಕಣ್ಣಿನ ತಪಾಸಣೆ ಮಾಡಿಕೊಂಡರು.