ರೋಟರಿ ಜಿಲ್ಲಾಮಟ್ಟದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಆರೋಗ್ಯ ಪರ ಜಾಗೃತಿ ಕಾರ್ಯಕ್ರಮದ ಅಂಗವಾದ, “ಕ್ಯಾನ್ಸರ್ ಬಗ್ಗೆ ಜಾಗೃತಿ ಮತ್ತು ಮುನ್ನೆಚ್ಚರಿಕಾ ಕ್ರಮಗಳು” ಎಂಬ ವಿಷಯದ ಕುರಿತು ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಜು.17 ರಂದು ನಿಟ್ಟೆ ವಿದ್ಯಾಸಂಸ್ಥೆಯ ಕ್ಯಾಂಪಸ್ ನಲ್ಲಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಿಟ್ಟೆ ಮೆಡಿಕಲ್ ಸೆಂಟರ್‌ನ ಆರೋಗ್ಯಾಧಿಕಾರಿಗಳಾದ ಡಾ. ಪ್ರಕಾಶ್ ಶೆಟ್ಟಿ “ಕ್ಯಾನ್ಸರ್‌ನ ಸಾಮಾನ್ಯ ಲಕ್ಷಣಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳು” ಎಂಬ ವಿಷಯದ ಕುರಿತು ಮಾಹಿತಿ ನೀಡಿದರು. ಅವರು ತಮ್ಮ ಉಪನ್ಯಾಸದಲ್ಲಿ ಕ್ಯಾನ್ಸರ್ ನ ಆರಂಭಿಕ ಲಕ್ಷಣ, ಮತ್ತು ಅನುಸರಿಸಬೇಕಾದ ಮುನ್ನೆಚ್ಚರಿಕೆಯ ಕ್ರಮಗಳನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರೋಟರಿ ಕ್ಲಬ್ ನಿಟ್ಟೆಯ ಅಧ್ಯಕ್ಷ ರೊ. ಡಾ. ರಘುನಂದನ್, ಸಭೆಗೆ ಆಗಮಿಸಿದ್ದ ಅತಿಥಿಗಳನ್ನು ಹಾಗೂ ಸಭಿಕರನ್ನು ಪರಿಚಯಿಸಿದರು.
ಮಾಹಿತಿ ಕಾರ್ಯಕ್ರಮದ ಬಳಿಕ ವೇದಿಕೆಯಲ್ಲಿ ಡಾ. ಪ್ರಕಾಶ್ ಶೆಟ್ಟಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಭೆಯ ಅಂತ್ಯದಲ್ಲಿ ಕಾರ್ಯದರ್ಶಿ ರೊ ಶೈಲಜ ಶೆಟ್ಟಿ ಧನ್ಯವಾದಗಳನ್ನು ಸಲ್ಲಿಸಿದರು.