ಕೊಳಕ್ಕೆ ಇರ್ವತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆಯು ಅಧ್ಯಕ್ಷರಾದ ದಿನೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸಮಿತಿಗೆ ನೂತನ ಅಧ್ಯಕ್ಷರಾಗಿ ರಾಜೇಂದ್ರ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ಪ್ರಸಾದ್ ದೇವಾಡಿಗ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ವರ್ಷ 23ನೇ ಸಾರ್ವಜನಿಕ ಗಣೇಶೋತ್ಸವವು ಕೊಳಕ್ಕೆ ಇರ್ವತ್ತೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದೆ.
ಸಮಿತಿಗೆ ಗೌರವಾಧ್ಯಕ್ಷರಾಗಿ ಊರಿನ ಪ್ರಮುಖರಾದ ಜಯಕೀರ್ತಿ ಕಡಂಬ,ಡಾ. ಐ. ಜಿ. ಭಟ್,ಭಾಸ್ಕರ್ ಕೋಟ್ಯಾನ್ ಹಾಗೂ ಕೋಶಾಧಿಕಾರಿಯಾಗಿ ಮಿಥುನ್ ಪೂಜಾರಿ ಹಾಗೂ ಕಾರ್ಯಕಾರಿ ಸದಸ್ಯರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಊರಿನ ಪ್ರಮುಖರು ಉಪಸ್ಥಿತರಿದ್ದರು.

