ಜಾರ್ಕಳದ ಸರ್ವೇ ನಂಬರ್ 181/1ರಲ್ಲಿರುವ ಕಲ್ಲುಕೋರೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಕಾರ್ಮಿಕರು ಪರಾರಿಯಾಗಿದ್ದಾರೆ.
ಶನಿವಾರ ದಿಡೀರೆಂದು ಕೋರೆ ಪ್ರದೇಶಕ್ಕೆ ದಾಳಿ ಮಾಡಿದ ಪೊಲೀಸರು ಟಿಪ್ಪರ್ ಮತ್ತು ಜೆಸಿಬಿ ವಶಕ್ಕೆ ಪಡೆದಿದ್ದಾರೆ. ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸುರೇಂದ್ರ ಹಾಗೂ ಜೆಸಿಬಿ ಚಾಲಕನ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.