Saturday, August 2, 2025
Google search engine
Homeಕಾರ್ಕಳಅಪ್ರಾಪ್ತ ವಯಸ್ಸಿನ ಬಾಲಕಿಗೆ ಅತ್ಯಾಚಾರ-ಆರೋಪಿಗೆ ಕಠಿಣ ಶಿಕ್ಷೆ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅತ್ಯಾಚಾರ-ಆರೋಪಿಗೆ ಕಠಿಣ ಶಿಕ್ಷೆ

ಕಾರ್ಕಳ:ಡಿವೈಎಸ್ಪಿ ಅರವಿಂದ ಕಲಗುಜ್ಜಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಪೋಕ್ಸೋ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ ಅದ್ದೇಶಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಂಜುನಾಥ್ ಎನ್. ಶಿಕ್ಷೆಗೆ ಗುರಿಯಾದವನು.

ನೊಂದ ಬಾಲಕಿಯ ಅಣ್ಣನ ಸ್ನೇಹಿತನಾದ ಆರೋಪಿ ಬಾಲಕಿಯನ್ನು ಫೋನ್ ನಲ್ಲಿ ಸಂಪರ್ಕಿಸಿ, ಪ್ರೀತಿಸುವುದಾಗಿ ನಂಬಿಸಿದ್ದನು. ಅನಂತರ ನಮ್ಮ ಪ್ರೀತಿಯ ಬಗ್ಗೆ ಅಣ್ಣನಿಗೆ ತಿಳಿಸುವುದಾಗಿ ಹೇಳಿ ಬೆದರಿಸುತ್ತಿದ್ದನು. ಸಂತ್ರಸ್ಥೆ ತನ್ನ ಅಜ್ಜಿ ಮನೆಯಾದ ಗದಗ ಜಿಲ್ಲೆಯ ರೋಣ ತಾಲೂಕಿಗೆ ತೆರಳಿದ್ದಾಗ ಆರೋಪಿ ಆಕೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ಬೆಳೆಸಿದ್ದನು. ತಾನು ಇದರ ವಿಡಿಯೋ ಮಾಡಿದ್ದು, ಈ ವಿಚಾರವನ್ನು ಯಾರಿಗಾದರೂ ಹೇಳಿದ್ದಲ್ಲಿ ಅಣ್ಣ ಹಾಗೂ ಮನೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದನು.

ಅನಂತರ ಸಂತ್ರಸ್ಥೆ ಮನೆಗೆ ವಾಪಸಾದ ಬಳಿಕ ತಾಯಿಗೆ ಈ ವಿಚಾರ ತಿಳಿಸಿದ್ದು, ಅದರಂತೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಅಂದಿನ ಕಾರ್ಕಳದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಒಟ್ಟು 39 ಸಾಕ್ಷಿಗಳ ಪೈಕಿ ಸಂತ್ರಸ್ಥ ಬಾಲಕಿ ಸಹಿತ 16 ಸಾಂದರ್ಭಿಕ ಸಾಕ್ಷಿಗಳ ವಿಚಾರಣೆ ನಡೆಸಿ, ಆರೋಪಿಯನ್ನು ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಮಾನಿಸಿದೆ.

ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗ್ರಹ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದ್ದು, ನೊಂದ ಬಾಲಕಿಗೆ ಸರ್ಕಾರದಿಂದ 1.5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.

RELATED ARTICLES
- Advertisment -
Google search engine

Most Popular

Recent Comments

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments