ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯು ಆರ್ ಜಿಎಸ್ಎ ಯೋಜನೆಯಡಿ ಎಲ್ಲಾ ತಾಲೂಕುಗಳ ಆಯ್ದ ಗ್ರಾಮ ಪಂಚಾಯತ್ ಗಳಿಗೆ ಐಎಸ್ಓ ಪ್ರಮಾಣೀಕರಣವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಜು. 22 ರಂದು ಮೈಸೂರಿನ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ವಸತಿ ನಿಲಯದಲ್ಲಿ ಒಂದು ದಿನದ ತರಬೇತಿ ಹಮ್ಮಿಕೊಂಡಿದ್ದು, ಜಿಲ್ಲೆಯ 7 ತಾಲೂಕುಗಳಿಂದ 14 ಪಂಚಾಯತ್ ಗಳ ಪ್ರಶಿಕ್ಷಣಾರ್ಥಿಗಳು ಆಯ್ಕೆಯಾಗಿದ್ದಾರೆ.
ಕಾರ್ಕಳ ತಾಲೂಕಿನ ನಲ್ಲೂರು ಹಾಗೂ ಕುಕ್ಕುಂದೂರು, ಹೆಬ್ರಿ ತಾಲೂಕಿನ ಹೆಬ್ರಿ ಹಾಗೂ ವರಂಗ ಗ್ರಾಮ ಪಂಚಾಯತ್ ಗಳು ಆಯ್ಕೆಯಾಗಿವೆ ಎಂದು ಜಿಲ್ಲಾ ಪಂಚಾಯತ್ ಕಚೇರಿ ಪ್ರಕಟಣೆ ತಿಳಿಸಿದೆ.