ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಹಾಗೂ ಬೆಳ್ಮಣ್ಣು ಜೇಸಿಐ ಘಟಕದ ಜಂಟಿ ಆಶ್ರಯಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ ಜರಗಿತು.
ಭಾರತೀಯ ಜೇಸಿಐನ ನಿಯೋಜಿತ ರಾಷ್ಟ್ರೀಯ ತರಬೇತುದಾರ ಮೋಹನ್ ಕಲ್ಪತರು ತುಮಕೂರು ಅವರು ಎರಡು ಗಂಟೆಗಳ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಬೆಳ್ಮಣ್ಣು ಜೇಸಿಐ ಘಟಕಾಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪೂರ್ವಾಧ್ಯಕ್ಷರಾದ ಸತ್ಯನಾರಾಯಣ ಭಟ್, ಕಾರ್ಯಕ್ರಮದ ನಿರ್ದೇಶಕರಾದ ಪ್ರದೀಪ್ ಸುವರ್ಣ ಕೆಮ್ಮಣ್ಣು, ಸದಸ್ಯರಾದ ಮಂಜುನಾಥ ಆಚಾರ್ಯ, ಸುರೇಶ್ ಕಾಸರಬೈಲು, ಉದಯ ಅಂಚನ್, ಸಂಧ್ಯಾ ಶೆಟ್ಟಿ, ಲಲಿತಾ ಆಚಾರ್ಯ, ವೀಣಾ ಆಚಾರ್ಯ, ಸುಲೋಚನಾ, ಪದ್ಮಶ್ರೀ, ವೀಣಾ ಪೂಜಾರಿ, ಬಾಲಕೃಷ್ಣ ಮಡಿವಾಳ, ಶಾಂತರಾಮ್ ಕುಲಾಲ್, ಸುರೇಶ್ ಅಬ್ಬನಡ್ಕ, ಪುಷ್ಪ ಕುಲಾಲ್, ಹರೀಶ್ ಪೂಜಾರಿ, ಕೀರ್ತನ್ ಬೋಳ, ನಿಟ್ಟೆ ರೋಟರಿ ಸಮುದಾಯದಳದ ಸದಸ್ಯರಾದ ಉಮೇಶ್ ಕೋಟ್ಯಾನ್, ಶಂಕರ ಪೂಜಾರಿ, ಪ್ರಕಾಶ್ ಸಾಲ್ಯಾನ್, ಶ್ರೀಧರ್ ಆಚಾರ್ಯ ಉಪಸ್ಥಿತರಿದ್ದರು.