ಧರ್ಮಸ್ಥಳ ಅಸ್ವಾಭಾವಿಕ ಮರಣ ಪ್ರಕರಣ : SIT ತಂಡಕ್ಕೆ ಹೆಚ್ಚುವರಿ 20 ಪೊಲೀಸ್‌ ಅಧಿಕಾರಿಗಳ ನೇಮಕ

0

 

ಧರ್ಮಸ್ಥಳ ಅಸ್ವಾಭಾವಿಕ ಮರಣಗಳ ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್‌ಐಟಿ ತಂಡಕ್ಕೆ ಹೆಚ್ಚುವರಿಯಾಗಿ 20 ಪೊಲೀಸ್ ಅಧಿಕಾರಿಗಳನ್ನು ಸೇರ್ಪಡೆ ಮಾಡಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳ ವಿವಿಧ ಠಾಣೆಗಳ ಇನ್ಸ್ ಪೆಕ್ಟರ್, ಸಬ್‌ ಇನ್ಸ್ ಪೆಕ್ಟರ್, ಎಎಸ್‌ಐಗಳನ್ನು ಎಸ್‌ಐಟಿ ತಂಡಕ್ಕೆ ನೇಮಿಸಿ ಡಿಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

ಮೊದಲಿಗೆ ಧರ್ಮಸ್ಥಳ ಪೊಲೀಸ್‌ ಠಾಣೆಗೆ ಆಗಮಿಸಲಿರುವ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಮತ್ತು ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟ‌ರ್ ಅವರಿಂದ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ. ಬಳಿಕ ತನಿಖೆ ಪ್ರಕ್ರಿಯೆ ಬಗ್ಗೆ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನಿರ್ಧರಿಸಲಿದ್ದಾರೆ. ವ್ಯಕ್ತಿಯ ದೂರು ಆಧರಿಸಿ ಹಲವು ಆಯಾಮಗಳಲ್ಲಿ ತನಿಖೆ ನಡೆಯಲಿದೆ.

ಮಂಗಳೂರು ಡಿಸಿಆರ್‌ಇ ಎಸ್‌ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್‌ ಇನ್ಸ್ಪೆಕ್ಟರ್ ಮಂಜುನಾಥ್, ಸಿಎಸ್‌ಪಿ ಇನ್ಸ್ಪೆಕ್ಟರ್ ಸಿಎಸ್‌ಪಿ ಪೊಲೀಸ್ ಇನ್ಸ್ಪೆಕ್ಟರ್ ఇసి ಸಂಪತ್, ಕೆ.ಕುಸುಮಾಧ‌ರ್ ತಂಡದಲ್ಲಿದ್ದಾರೆ.

ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್‌ ಇನ್ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್ಪೆಕ್ಟರ್ ಪಿ.ಡಿ ಸವಿತ್ರತೇಜ, ಸಿಎಸ್‌ಪಿ ಸಬ್ ಇನ್ಸ್ ಪೆಕ್ಟರ್ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ ಇನ್ಸ್ ಪೆಕ್ಟರ್ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್ ಇನ್ಸ್‌ಪೆಕ್ಟರ್ ಶಿವಶಂಕರ್, ಉತ್ತರ ಕನ್ನಡ, ಶಿರಸಿ ಎನ್ ಎಂ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ರಾಜ್‌ಕುಮಾ‌ರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ‌ ಆರ್. ಸುಹಾಸ್ ಇದ್ದಾರೆ.

ಉತ್ತರ ಕನ್ನಡ ಮುಂಡಗೋಡ ಠಾಣೆ ಸಬ್ ಇನ್ಸ್ ಪೆಕ್ಟರ್ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಸ್ಕಾಂ ಸಬ್ ಇನ್ಸ್ ಪೆಕ್ಟರ್ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್‌ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್ ಕಾನ್‌ಸ್ಟೇಬಲ್ ದೇವರಾಜ್ ಅವರನ್ನು ನಿಯೋಜನೆ ಮಾಡಲಾಗಿದೆ. ಅಪರಾಧ ಪತ್ತೆಯಲ್ಲಿ ಪರಿಣತಿ ಪಡೆದ ಪೊಲೀಸರ ತಂಡವನ್ನು ರಚಿಸಲಾಗಿದ್ದು ಇವರು ಸರದಿಯಂತೆ ಬಂದು ತನಿಖೆ ನಡೆಸುವ ಸಾಧ್ಯತೆಯಿದೆ.

   

LEAVE A REPLY

Please enter your comment!
Please enter your name here