ಕರಾವಳಿ ಜಿಲ್ಲೆಗಳಾದ್ಯಂತ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.ಜಿಲ್ಲೆಯ ಅಂಗನವಾಡಿ, ಶಾಲೆ, ಐ.ಟಿ.ಐ. ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.
ಮಳೆ ಹೆಚ್ಚಿರುವ ಪರಿಣಾಮ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ನೀರಿನ ಹರಿವು ಹೆಚ್ಚಿರುವ ಪ್ರದೇಶ, ಬೆಟ್ಟ-ಗುಡ್ಡಗಳ ತಪ್ಪಲಿನ ನಿವಾಸಿಗಳಿಗೆ ಎಚ್ಚರದಿಂದಿರಲು ಸೂಚಿಸಿದೆ. ಅಲ್ಲದೆ, ಕಡಲು ಪ್ರಕ್ಷುಬ್ಧವಾಗಿದ್ದು, ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಸಿದೆ.