ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ರಜತ ಸಂಭ್ರಮದ ಸವಿ ನೆನಪಿಗಾಗಿ ತುಳು ಪರ್ಬ ಸಮಾರಂಭವು ಜುಲೈ 27ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 11-00ಕ್ಕೆ ಸರಿಯಾಗಿ ಜರಗಲಿದೆ.
ಹಿರಿಯ ಸಾಹಿತಿಗಳು ಮತ್ತು ಬೆಳ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಜನಾರ್ಧನ ಭಟ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ದಿನೇಶ್ ಪೂಜಾರಿ ಅವರು ಗೌರವ ಉಪಸ್ಥಿತಿತರಿರುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕರಾದ ಪಾಂಗಾಳ ಬಾಬು ಕೊರಗ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ತುಳು ಪರ್ಬದ ಅಂಗವಾಗಿ ತುಳು ಕವಿಗೋಷ್ಠಿ ನಡೆಯಲಿದ್ದು ಕವಿಗೋಷ್ಠಿಯಲ್ಲಿ ವಾಸಂತಿ ಅಂಬಲಪಾಡಿ, ಹರಿಪ್ರಸಾದ್ ನಂದಳಿಕೆ, ದೀಪಿಕಾ ಉಡುಪಿ, ಸುಲೋಚನಾ ಪಚ್ಚಿನಡ್ಕ, ಶ್ರೀ ಮುದ್ರಾಡಿ ಅವರು ಭಾಗವಹಿಸಲಿದ್ದಾರೆ.
ತುಳು ಪರ್ಬದ ವೇದಿಕೆಯಲ್ಲಿ ಸ್ಥಳೀಯ ಪ್ರತಿಭೆಗಳಿಂದ ಸಂಗೀತ ಕಾರ್ಯಕ್ರಮ ಹಾಗೂ ನೃತ್ಯ ಕಾರ್ಯಕ್ರಮ ಜರಗಲಿದ್ದು ನಂತರ ತುಳುನಾಡ ಶೈಲಿಯ ಭೋಜನಕೂಟ ನಡೆಯಲಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.