ಮುಡಾರು ಗ್ರಾಮ ಪಂಚಾಯತ್:2024-25ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ
ಮುಡಾರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ವಿ ಎಸ್ ಆಚಾರ್ಯ ಸಭಾಭವನದಲ್ಲಿ ನಡೆಯಿತು.
2023-24 ನೇ ಸಾಲಿನ ಮುಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಅಭಿವೃದ್ದಿ ಕಾರ್ಯಕ್ರಮಗಳ ವರದಿ ಮಂಡನೆ ಮಾಡಲಾಯಿತು. ಸರಕಾರದ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಇಲಾಖಾವಾರು ಮಾಹಿತಿ ನೀಡಲಾಯಿತು. ಸಾರ್ವಜನಿಕರಿಂದ ಹಲವಾರು ಅರ್ಜಿ ಅಹವಾಲುಗಳನ್ನು ಸ್ವೀಕರಿಸಲಾಯಿತು. ಸರಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.
ಮುಖ್ಯವಾಗಿ ಸಾರ್ವಜನಿಕರಿಂದ ಅಪಾಯಕಾರಿ ಮರ ತೆರವಿನ ಬಗ್ಗೆ ರುದ್ರಭೂಮಿಯ ಬಗ್ಗೆ ಪಿ ಡಬ್ಲ್ಯೂಡಿ ಇಲಾಖೆಗಳ ಸಮರ್ಪಕ ಚರಂಡಿ ನಿರ್ವಹಣೆ ಮಾಡುವಂತೆ ಸಾರ್ವಜನಿಕರು ಬೇಡಿಕೆ ಇಟ್ಟರು. ವಾರಾಹಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಪೈಪ್ ಲೈನ್ ಮಾರ್ಗ ರಚನೆಗೆ ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ ಡಿ ಅತಿಕಾರಿಯವರು ಮಾತನಾಡಿ ಅತ್ಯಂತ ಪಾರದರ್ಶಕವಾಗಿ ಜನಪರ ಕಾರ್ಯಗಳನ್ನು ಗ್ರಾಮ ಪಂಚಾಯತ್ ಮಾಡುತ್ತ ಇದ್ದು ಗ್ರಾಮದ ಸಮಗ್ರ ಅಭಿವೃದ್ದಿಗೆ ಗ್ರಾಮಸ್ಥರ ಸಹಕಾರಯಾಚಿಸಿದರು.
ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ ಡಿ ಅತಿಕಾರಿ ವಹಿಸಿದರು. ನೋಡೆಲ್ ಅಧಿಕಾರಿ ಸಿದ್ದಪ್ಪ ತುಡುಬಿನ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ರಮೇಶ್ ಎಸ್, ಕಾರ್ಯದರ್ಶಿ ಜಯಕರ್, ಗ್ರಾಮ ಆಡಳಿತಾಧಿಕಾರಿಯಾದ ಭಾಲಕೃಷ್ಣ ತಲ್ಲೂರು, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರಾದ ಮಾಲತಿ ನಾಯ್ಕ್, ರೇಖಾ ಎಸ್ ಭಂಡಾರಿ, ವಿನಯ ಡಿ ಬಂಗೇರ, ಜಾಯ್ಸ್ ಪ್ರೆಸಿಲ್ಲಾ, ಸಂತೋಷ್ ಪೂಜಾರಿ, ಸುರೇಶ್ ಶೆಟ್ಟಿ, ಹರೀಶ್ ಪೂಜಾರಿ, ಶಿವ ಪ್ರಸಾದ್, ಪ್ರಶಾಂತ್ ಕುಮಾರ್, ರಜತ್ ರಾಮ್ ಮೋಹನ್ ಉಪಸ್ಥಿತರಿದ್ದರು.