ಸೌಹಾರ್ದ ಸಹಕಾರ ಸಂಘ ದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ಲಂಚ ಕೇಳುವ ವೇಳೆ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದಿದ್ದಾರೆ.
ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆ ಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಇಂದು (ಗುರುವಾರ) ತಲಾ 5000 ದಂತೆ ಒಟ್ಟು 10000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಶಾಂತಿನಿಕೇತನ ಸೌಹರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ನರೇಂದ್ರ ಎಸ್ ದೂರಿನ ಮೇರೆಗೆ ಸ್ಥಳಕ್ಕೆ ದಾಳಿ ಮಾಡಿದ ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರರವರ ಮಾರ್ಗದರ್ಶನದ ತಂಡ ಭ್ರಷ್ಟ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಭ್ರಷ್ಟರನ್ನು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಮಂಜುನಾಥ್ ಶಂಕರ ಹಳ್ಳಿ, ಪ್ರಭಾರ ಪೊಲೀಸ್ ಉಪಾಧೀಕ್ಷಕರು,ಪೊಲೀಸ್ ನಿರೀಕ್ಷಕರಾದ ರಾಜೇಂದ್ರ ನಾಯಕ್ ಎಂ, ಎನ್ ., ಮಂಗಳೂರು ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಚಂದ್ರ ಶೇಖರ, ಉಡುಪಿ ಲೋಕಾಯುಕ್ತ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಸತೀಶ್ ಹಂದಾಡಿ, ಮಲ್ಲಿಕಾ, ಪುಷ್ಪಾವತಿ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್,ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಭಾಗವಹಿಸಿದ್ದರು.
ಸಹಕಾರಿ ರಂಗದಲ್ಲಿ ಸರ್ಕಾರಿ ಅಧಿಕಾರಿಗಳ ಅತಿಯಾದ ಭ್ರಷ್ಟಾಚಾರ -ಶಾಂತಿನಿಕೇತನ ಸೌಹಾರ್ದ ಸಹಕಾರಿ ಆಡಳಿತ ಮಂಡಳಿ ಹೇಳಿಕೆ
ಶಾಂತಿನಿಕೇತನ ಸೌಹರ್ದ ಸಹಕಾರಿ ಆಡಳಿತ ಮಂಡಳಿಯ ಸದಸ್ಯರು ಯಾವುದೇ ಸಂಭಾವನೆ ಪಡೆಯದೇ ಮತ್ತು ಸಿಬ್ಬಂದಿ ವರ್ಗ ಸಹಾ ಕಡಿಮೆ ಸಂಬಳಕ್ಕೆ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಸಹಕಾರಿ ಕ್ಷೇತ್ರದ ಮೂಲಕ ಜನಸಾಮಾನ್ಯರಿಗೆ ಉತ್ತಮ ಸೇವೆ ಸಲ್ಲಿಸುವ ಉದ್ದೇಶದಿಂದ ಈ ತಂಡ ಕಾರ್ಯನಿರ್ವಹಿಸುತ್ತಿದೆ. ಆದರೆ ಇಂತಯ ಭ್ರಷ್ಟ ವ್ಯವಸ್ಥೆ ನಮಗೆ ಅಪಾರ ನೋವು ಮತ್ತು ಬೇಸರ ಉಂಟು ಮಾಡಿದ್ದು ಅದನ್ನು ಸರಿ ಮಾಡುವುದೇ ನಮ್ಮ ತಂಡದ ಪ್ರಯತ್ನ.
ಶಾಂತಿನಿಕೇತನದ ಆಡಳಿತ ಮಂಡಳಿ ಈ ಭ್ರಷ್ಟಾಚಾರ ನಿರ್ಮೂಲನೆಗೆ ಸಂಪೂರ್ಣ ಸಹಕಾರ ನೀಡಿ ದಿಟ್ಟ ಹೆಜ್ಜೆ ತೆಗೆದುಕೊಂಡು ಸಿಬ್ಬಂದಿ ವರ್ಗಕ್ಕೆ ಸಂಪೂರ್ಣ ಸಹಕಾರ ನೀಡಲಾಗಿತ್ತು.