ಆಗಸ್ಟ್ 01 ಮತ್ತು 02 ನೇ ತಾರೀಖಿನಂದು ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆ ಆವರಣದಲ್ಲಿ ನಡೆಯಲಿರುವ “ಆಳ್ವಾಸ್ ಪ್ರಗತಿ” ಎಂಬ ಬೃಹತ್ ಉದ್ಯೋಗ ಮೇಳದ ಅಂಗವಾಗಿ ನಾಳೆ ಬೆಳಿಗ್ಗೆ 09.30 ಗಂಟೆಗೆ ಕಾರ್ಕಳದ ಎಸ್ ವಿ ಟಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಮಾಹಿತಿ ಶಿಬಿರ ನಡೆಯಲಿದೆ.
ಈ ಮಾಹಿತಿ ಶಿಬಿರದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಭಾಗವಹಿಸಲಿದ್ದು, ಉದ್ಯೋಗ ಮೇಳದ ಕುರಿತಾಗಿ ಹಾಗೂ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ಸಂಸ್ಥೆಗಳ ಆಯ್ಕೆಗಳ ಬಗ್ಗೆ ಪೂರ್ವಭಾವಿಯಾಗಿ ಮಾಹಿತಿ ನೀಡಲಿದ್ದಾರೆ.
ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲಾ ಉದ್ಯೋಗಾಕಾಂಕ್ಷಿಗಳು ಹಾಗೂ ಯುವ ಸಮೂಹ ಈ ಮಾಹಿತಿ ಶಿಬಿರದಲ್ಲಿ ಭಾಗವಹಿಸಿ ಆಳ್ವಾಸ್ ಪ್ರಗತಿ ಎಂಬ ಬೃಹತ್ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.