ಪಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜು.28 ರಂದು ಶಿಕ್ಷಣ ಇಲಾಖೆಯ ಆದೇಶದಂತೆ ಒಂದನೆಯ ತರಗತಿ ಆಂಗ್ಲ ಮಾಧ್ಯಮ ವಿಭಾಗವನ್ನು ಉದ್ಘಾಟಿಸಲಾಯಿತು.
ಶಾಲೆಯ ಹಳೆಯ ವಿದ್ಯಾರ್ಥಿ ರಘುನಾಥ್ ಶೆಟ್ಟಿ ಪಳ್ಳಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಜಗದೀಶ್ ಹೆಗ್ಡೆ ಪಳ್ಳಿ ಮತ್ತು ಪಂಚಾಯತ್ ಅಧ್ಯಕ್ಷೆ ಉಷಾ ಅಂಚನ್ ಇಂಗ್ಲಿಷ್ ತರಗತಿ ಉದ್ಘಾಟಿಸಿ, ಆಂಗ್ಲ ಮಾಧ್ಯಮದ ಅಗತ್ಯತೆಯನ್ನು ತಿಳಿಸಿ ಶುಭ ಹಾರೈಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಇಲಾಖೆಯ ವತಿಯಿಂದ ಆಗಮಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ ಶೆಟ್ಟಿ, ಕನ್ನಡದ ಜೊತೆಗೆ ಆಂಗ್ಲ ಭಾಷೆ ಕಲಿಕೆಯ ಮಹತ್ವವನ್ನು ತಿಳಿಸಿ ಇಲಾಖೆಯ ಆಶಯವನ್ನು ಪ್ರಾಸ್ತಾವಿಕದ ಮೂಲಕ ತಿಳಿಸಿದರು. ಆಂಗ್ಲ ಮಾಧ್ಯಮ ವಿಭಾಗಕ್ಕೆ ಹಳೆ ವಿದ್ಯಾರ್ಥಿಗಳ ನೆರವಿನಿಂದ ಶಿಕ್ಷಕರನ್ನು ನೇಮಿಸಿ ವೇತನವನ್ನು ನೀಡುವ ವ್ಯವಸ್ಥೆ ಮಾಡಿದರು.
ಉದ್ಘಾಟನಾ ಸಮಾರಂಭದಲ್ಲಿ ದಾನಿಗಳಾದ ಶೇಖರ್ ಶೆಟ್ಟಿ ಪಳ್ಳಿ, ಜಯಕರ ಶೆಟ್ಟಿ, ಮನೋಹರ್ ಶೆಟ್ಟಿ, ಪಂಚಾಯತ್ ಸದಸ್ಯ ವಿಜಯ್ ಎಂ ಶೆಟ್ಟಿ, ಗೋವಿಂದ ಜೋಗಿ, ದಿನಕರ ಶೆಟ್ಟಿ, ಪ್ರಶಾಂತ್ ಶೆಟ್ಟಿ, ನಿಟ್ಟೆ ಸಮೂಹ ಸಂಪನ್ಮೂಲ ವ್ಯಕ್ತಿ ಶಿವಾನಂದ ಕೆ, ಎಸ್ ಡಿ ಎಮ್ ಸಿ ಅಧ್ಯಕ್ಷ ಪ್ರಭಾಕರ ಬಂಗೇರ, ಮುಖ್ಯ ಶಿಕ್ಷಕಿ ನಾಗರತ್ನ, ವಿದ್ಯಾರ್ಥಿ ನಾಯಕಿ ಸೌಮ್ಯ ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಪ್ರೇಮಲತಾ ಸ್ವಾಗತಿಸಿದರು. ಶಿಕ್ಷಕಿ ಲಕ್ಷ್ಮೀ ವಂದಿಸಿದರು. ಶಿಕ್ಷಕಿ ಚಿತ್ರಾ ಕಾರ್ಯಕ್ರಮ ನಿರೂಪಿಸಿದರು.