
ಸ್ಯಾಂಡಲ್‌ವುಡ್ ನಟ, ನಿರ್ಮಾಪಕ ಆನೇಕಲ್ ಬಾಲರಾಜ್ ಪುತ್ರ ಸಂತೋಷ್ ಬಾಲರಾಜ್ (34) ನಿಧನರಾಗಿದ್ದಾರೆ. ನಟ ಸಂತೋಷ್ ಬಾಲರಾಜ್ ಜಾಂಡೀಸ್‌ನಿಂದ ಬಳಲುತ್ತಿದ್ದು, ಇತ್ತೀಚಿಗೆ ಚಿಕಿತ್ಸೆಗಾಗಿ ಬೆಂಗಳೂರಿನ ಬನಶಂಕರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋಮಾಗೆ ಹೋಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ 34 ವಯಸ್ಸಿನ ನಟ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ಗೆ ಚಿಕಿತ್ಸೆ ಪಡೆದಿದ್ದರು. ಮೊನ್ನೆಯಷ್ಟೇ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದರಿಂದ ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಜಾಂಡೀಸ್ನಿಂದಾಗಿ ನಟ ಸಂತೋಷ್ ಕೋಮಾಗೆ ಹೋಗಿದ್ದರು. 2 ದಿನಗಳ ಹಿಂದೆ ಸಂತೋಷ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಂತೋಷ್ ಬೇಗ ಚೇತರಿಸಿಕೊಳ್ಳಲಿ ಎಂದು ಆಪ್ತರು, ಕುಟುಂಬ ವರ್ಗ ಪ್ರಾರ್ಥಿಸುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಂತೋಷ್ ಬಾಲರಾಜ್ ಸಾವನಪ್ಪಿದ್ದಾರೆ.



































