ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ

0

ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಆ.9 ರಂದು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು.

ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ ಮತ್ತು ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯ ನುಡಿ ಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಾನೂನಿನ ಅರಿವನ್ನು ಮೂಡಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ” ದೇಶದ ಕಾನೂನಿಗೆ ನಾವೆಲ್ಲರೂ ತಲೆಬಾಗಿ ಅದನ್ನು ಪರಿಪಾಲಿಸಿದಾಗ ನಮಗೆ ಆತಂಕಗಳಿಲ್ಲ ನಾವೆಲ್ಲರೂ ಸುರಕ್ಷಿತ”. ಎಂದು ನುಡಿದರು. ವೇದಿಕೆಯಲ್ಲಿ ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಉಪಸ್ಥಿತರಿದ್ದರು. ಕಾರ‍್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಶ್ರೀ ಸಂತೋಷ್ ರವರು ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here