ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ರಕ್ಷಾ ಬಂಧನ ಕಾರ್ಯಕ್ರಮ

0

 

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಸಾಂಪ್ರದಾಯಿಕವಾಗಿ ಜರಗಿತು.

ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದವರು ಜಗತ್ತಿನಲ್ಲಿ ಸ್ವಾರ್ಥರಹಿತ ಸಂಬಂಧವೆಂದರೆ ಅದು ಅಣ್ಣ ತಂಗಿಯರ ಸಂಬಂಧ ಹೀಗಾಗಿ ಶ್ರಾವಣ ಹುಣ್ಣಿಮೆಯ ವಿಶೇಷ ದಿನದಂದು ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಿಸುತ್ತಾರೆ ಎಂದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿ ಭಾರತ ದೇಶದ ಧಾರ್ಮಿಕ ಹಬ್ಬವಾಗಿರುವ ಈ ಹಬ್ಬದಲ್ಲಿ ಸಹೋದರಿಯರಿಂದ ರಾಖಿ ಕಟ್ಟಿಸಿಕೊಂಡ ಸಹೋದರರು ಸದಾ ನಿಮ್ಮ ರಕ್ಷಣೆ ನಮ್ಮ ಹೊಣೆ ಎಂಬ ಮಾತನ್ನು ಪಾಲಿಸಿಕೊಂಡು ಹೋಗುವ ಸಂಪ್ರದಾಯಕ್ಕೆ ಈ ಹಬ್ಬ ಸಾಕ್ಷಿಯಾಗಿದೆ ಎಂದರು.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಮಹಿಳಾ ಸದಸ್ಯರು ಸಂಘದ ಸಹೋದರ ಸದಸ್ಯರಿಗೆ ಆರತಿ ಬೆಳಗಿ, ಕುಂಕುಮ ಹಚ್ಚಿ, ಸಿಹಿ ತಿನ್ನಿಸಿ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುರೇಶ್ ಕಾಸ್ರಬೈಲು, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಸತೀಶ್ ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಕಾರ್ಯಕ್ರಮದ ನಿರ್ದೇಶಕರು ಆರತಿ, ಸದಸ್ಯರಾದ ಸುರೇಶ್ ಅಬ್ಬನಡ್ಕ, ಸುದರ್ಶನ್ ಕುಂದರ್, ಪ್ರದೀಪ್ ಸುವರ್ಣ, ಹರಿಣಿ ಪೂಜಾರಿ, ವೀಣಾ ಪೂಜಾರಿ, ಸುಲೋಚನಾ ಕೋಟ್ಯಾನ್, ವೀಣಾ ಆಚಾರ್ಯ, ಪದ್ಮಶ್ರೀ ಪೂಜಾರಿ, ಪುಷ್ಪ ಕುಲಾಲ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here