Home ಕಾರ್ಕಳ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ಕಾರ್ಯಕಾರಿಣಿ ಸಭೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ಕಾರ್ಯಕಾರಿಣಿ ಸಭೆ

0

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಹಾಗೂ ಕಾರ್ಯಕಾರಿಣಿ ಸಭೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಕಾರ್ಯಕಾರಿಣಿ ಸಭೆಯು‌‌ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಅವರು ದ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಪಕ್ಷ ಕಾಂಗ್ರೆಸ್, ನಾವು ಕಾಂಗ್ರೆಸ್ ಪಕ್ಷದ ಸದಸ್ಯರು ಎನ್ನಲು ಹೆಮ್ಮೆಯಾಗುತ್ತದೆ, ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಸ್ವಾತಂತ್ರ್ಯ ಸೇನಾನಿಗಳ ಹೋರಾಟದ ಫಲವಾಗಿ ನಾವಿಂದು ಸ್ವಾತಂತ್ರ್ಯದ ಸವಿಯನ್ನು ಅನುಭವಿಸುವಂತಾಗಿದೆ, ನಮಗಾಗಿ ತ್ಯಾಗ ಬಲಿದಾನಗೈದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ನಾವು ಈ ಸಂದರ್ಭದಲ್ಲಿ ನೆನೆಯಬೇಕು ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರ ಪಾಲ್ ನಕ್ರೆಯವರು ಮಾತನಾಡಿ ಬ್ರಿಟೀಷರು ದೇಶದ ಎಲ್ಲಾ ಸಂಪತ್ತನ್ನು ಕೊಳ್ಳೆ ಹೊಡೆದು ದುರ್ಬಲ ಭಾರತವನ್ನು ಕಾಂಗ್ರೆಸ್ ಕೈಗಿತ್ತು ಹೋದರು, ಎಲ್ಲಾ ಕ್ಷೇತ್ರದಲ್ಲಿಯು ಹಿಂದುಳಿದಿದ್ದ ಭಾರತವನ್ನು ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಮತ್ತೆ ಜಗತ್ತಿನೆದುರು ಸಶಕ್ತಿಶಾಲಿ ರಾಷ್ಟ್ರವಾಗಿ ನಿರ್ಮಾಣ ಮಾಡಲಾಯಿತು, ಸಾರ್ವಭೌಮ ರಾಷ್ಟ್ರ ನಿರ್ಮಾಣದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ ಎಂದು ಸ್ವಾತಂತ್ರ್ಯದ ಸಂದೇಶವನ್ನು ಸಾರಿದರು.

ಹಿರಿಯ ಮುಖಂಡ ನ್ಯಾಯವಾದಿಗಳಾದ ಶೇಖರ ಮಡಿವಾಳ ಅವರು ಮಾತನಾಡಿ ಕಾರ್ಕಳದ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡಿದ ಶಾಸಕರು ಸಜ್ಜನ ರಾಜಕಾರಣಿ ದಿ. ಗೋಪಾಲ ಭಂಡಾರಿಯವರ ಪುತ್ಥಳಿ ನಿರ್ಮಾಣದ ಕುರಿತು ಪ್ರಸ್ತಾವನೆಗೈದರು. ಹಿರಿಯ ಕಾಂಗ್ರೆಸ್ ಮುಖಂಡರಾದ ಮಂಜುನಾಥ ಪೂಜಾರಿ ಮುದ್ರಾಡಿ ಹಾಗೂ ಕೆಪಿಸಿಸಿ ಸದಸ್ಯರಾದ ಸುರೇಂದ್ರ ಶೆಟ್ಟಿಯವರು ಸಂದರ್ಭೋಚಿತವಾಗಿ ಮಾತನಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಅಧ್ಯಕ್ಷ ಶುಭದ ರಾವ್ ಮಾತನಾಡಿ ಅತಿ ಶೀಘ್ರದಲ್ಲಿ ಕಾರ್ಕಳದಲ್ಲಿ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ಥಳಿ ನಿರ್ಮಾಣದ ಕಾರ್ಯವನ್ನು ಸರ್ವರ ಸಹಕಾರದೊಂದಿಗೆ ಕೈಗೊಳ್ಳಲಾಗುವುದು ಎಂದರು. ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಪಕ್ಷ ಕಾಂಗ್ರೆಸ್, ಇಂದು ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷನಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಅತ್ಯಂತ ಹೆಮ್ಮೆಯಾಗುತ್ತದೆ ಎಂದರು, ಹಾಗೂ ಕಾರ್ಕಳ ಬ್ಲಾಕ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಅತ್ಯಂತ ಬಲಿಷ್ಠವಾಗುತ್ತಿದೆ ಎಂದರು.

ಸಭೆಯಲ್ಲಿ ಬ್ಲಾಕ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ದೇವದಾಸ್.ಕೆ ಅವರಿಗೆ ಆದೇಶ ಪತ್ರವನ್ನು ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾದ್ಯಕ್ಷರಾದ ಸುಧಾಕರ ಕೋಟ್ಯಾನ್, ಇಂಟೆಕ್ ಅಧ್ಯಕ್ಷ ಕಿರಣ್ ಹೆಗ್ಡೆ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಬ್ಲಾಕ್ ಉಪಾಧ್ಯಕ್ಷರಾದ ಜಾರ್ಜ್ ಕ್ಯಾಸ್ಟಲಿನೊ, ಕೆಪಿಸಿಸಿ ರೈತ ಘಟಕದ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಕೋಶಾಧಿಕಾರಿ ಉಮೇಶ್ ರಾವ್ ಬಜಗೋಳಿ, ಕುಕ್ಕುಂದೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಉಷಾ.ಕೆ, ಸೊಸೈಟಿ ಅಧ್ಯಕ್ಷರಾದ ಸಿರಿಯಣ್ಣ ಶೆಟ್ಟಿ, ಜಾನ್ ಡಿ’ಸಿಲ್ವಾ, ಮಾಜಿ‌ ಬ್ಲಾಕ್ ಅದ್ಯಕ್ಷ ಸದಾಶಿವ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಸೇವಾದಳದ ಅಬ್ದುಲ್ ಸಾಣೂರು, ಕಾನೂನು ಘಟಕದ ರೆಹಮತ್ತುಲ್ಲಾ, ಪ.ಪಂ ಅದ್ಯಕ್ಷ ಕಿರಣ್ ನಾಯ್ಕ, ಮೀನುಗಾರ ಘಟಕದ ಮುರಳಿ ರಾಣೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಘಟಕಗಳ ಅಧ್ಯಕ್ಷರು, ಚುನಾಯಿತ ಜನಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಬ್ಲಾಕ್ ಪಧಾದಿಕಾರಿಗಳು ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ರಮೇಶ್ ನಿಟ್ಟೆ ಅವರು ದೇಶಭಕ್ತಿ ಗೀತೆಯನ್ನು ಹಾಡಿದರು, ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಸ್ವಾಗತಿಸಿ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ ವಂದನಾರ್ಪಣೆಗೈದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

NO COMMENTS

LEAVE A REPLY

Please enter your comment!
Please enter your name here