
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿಯ ಬ್ರಹ್ಮಾವರ ಪೊಲೀಸರು ಬೆಳ್ತಂಗಡಿಗೆ ಆಗಮಿಸಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ದಾಖಲಾದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ. ಎಎಸ್ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಅರೆಸ್ಟ್ ಮಾಡಿ ಕರೆದುಕೊಂಡು ಹೋಗಿದ್ದಾರೆ.
ಉಡುಪಿ ಪೊಲೀಸರ ತಂಡ ಬೆಳ್ತಂಗಡಿಗೆ ಆಗಮಿಸಿದ್ದು, ಎಎಸ್ಪಿ ಸುಧಾಕರ್ ನಾಯಕ್, ಮಣಿಪಾಲ ಇನ್ ಸ್ಪೆಕ್ಟರ್, ಮಹೇಶ್ ಪ್ರಸಾದ್, ಡಿವೈಎಸ್ಪಿ ಪ್ರಭು ಡಿ.ಟಿ,ಬ್ರಹ್ಮಾವರ, ಇನ್ ಸ್ಪೆಕ್ಟರ್ ಗೋಪಿ ಕೃಷ್ಣ,ಕಾರ್ಕಳ ಗ್ರಾಮಂತರ ಪ್ರಸನ್ನ ಕುಮಾರ್ ಒಳಗೊಂಡ ತಂಡ ಆಗಮಿಸಿ ವಶಕ್ಕೆ ಪಡೆದಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.
ಬೆಳ್ತಂಗಡಿಯ ಕಬ್ಬಳ್ಳಿಗೆರೆ ಗ್ರಾಮಕ್ಕೆ ಆಗಮಿಸಿದ ಉಡುಪಿ ಪೊಲೀಸರ ತಂಡವು ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ಕಾರ್ಯಾಚರಣೆಯನ್ನು ಆರಂಭಿಸಿತು. ನಂತರ ತಿಮರೋಡಿ ನಿವಾಸದಲ್ಲಿ ಭಾರೀ ಹೈಡ್ರಾಮಾ ಸೃಷ್ಟಿಯಾದರೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ.
ಈ ಆರೋಪವು ಸಾಮಾಜಿಕ ಜಾಲತಾಣದಲ್ಲಿ ತಿಮರೋಡಿಯ ಪೋಸ್ಟ್‌ಗಳಿಗೆ ಸಂಬಂಧಿಸಿದ್ದು, ಧರ್ಮಸ್ಥಳದ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಅವಮಾನಿಸುವ ಉದ್ದೇಶದಿಂದ ಮಾಡಲಾದ ಕೃತ್ಯವೆಂದು ಬಿಜೆಪಿ ದೂರಿದೆ. ಈ ಹಿನ್ನೆಲೆಯಲ್ಲಿ, ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾನೂನು ಕ್ರಮಕ್ಕಾಗಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ.












