
ಕಾರ್ಕಳ:ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ-ಪ್ರಕರಣ ದಾಖಲು
ಕಾರ್ಕಳ:ಸಾಮಾಜಿಕ ಜಾಲತಾಣದಲ್ಲಿ ಭಾನು ಮುಷ್ತಾಕ್ ಕುರಿತು ಅವಹೇಳನಕಾರಿಯಾಗಿ ಬರೆದುದಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದೀಪ್ ಶೆಟ್ಟಿ ನಿಟ್ಟೆ ಎಂಬಾತ ತನ್ನ ಫೇಸ್ ಬುಕ್ ಖಾತೆಯಲ್ಲಿ ”ಬೂಕರ್ ಪ್ರಶಸ್ತಿ ಪುರಸ್ಕ್ರತೆ ಭಾನು ಮುಷ್ತಾಕ್ ಇವರಿಂದ ದಸರಾ ಉದ್ಘಾಟನೆ ಎಂಬುದಾಗಿ ಸಿ ಎಂ ಘೋಷಣೆ’‘ ಎಂಬ ಪೋಸ್ಟರ್‌ಗೆ “ದಸರಾ ಅನ್ನೋದು ಹಿಂದುಗಳ ಸಾಂಸ್ಕೃತಿಕ ಹಬ್ಬ. ಅಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಿಂದೂ ಸಂಪ್ರದಾಯದಂತೆ ನಡೆಯಲ್ಪಡುತ್ತದೆ ಅಂತಹವರಲ್ಲಿ ಸನಾತನ ಹಿಂದೂ ಸಂಸ್ಕೃತಿಯನ್ನು ಒಪ್ಪದ ಆಚರಣೆ ಮಾಡದ ಈಕೆಯಿಂದ ದಸರಾ ಉದ್ಘಾಟನೆ ಮಾಡುವ ದರ್ದು ಏನಿದೆ…..ಹಿಂದೂ ವಿರೋಧಿ ಕಾಂಗ್ರೆಸ್ ಹಿಂದೂಗಳ ಭಾವನೆಗೆ ಧಕ್ಕೆ ತರುವ ಪ್ರತಿಯೊಂದು ವಿಚಾರದಲ್ಲೂ ಮುಂದಿರುತ್ತದೆ…’’ ಎಂದು ಪೋಸ್ಟ್ ಮಾಡಿದ್ದ.
ಸಾಮಾಜಿಕ ಜಾಲತಾಣದಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈಷಮ್ಯ, ವೈರತ್ವ ಉಂಟು ಮಾಡುವ ರೀತಿಯಲ್ಲಿ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವುದಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 100/2025 ಕಲಂ 353(2) ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿದೆ.






































