
ರಂಗಭೂಮಿ ಕಲಾವಿದ, ಚಿತ್ರ ನಟ, ಕಲಾ ನಿರ್ದೆಶಕರಾಗಿದ್ದ ದಿನೇಶ್ ಮಂಗಳೂರು ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರಾಗಿದ್ದ ದಿನೇಶ್ ಮಂಗಳೂರು ಇಂದು ಬೆಳಗಿನ ಜಾವ ಕುಂದಾಪುರದಲ್ಲಿ ಮೃತಪಟ್ಟಿದ್ದಾರೆ.
ಒಂದು ವರ್ಷದಿಂದ ಅನಾರೋಗ್ಯದಿಂದ ಇವರು ಬಳಲುತ್ತಿದ್ದರು. ಇಂದು ಸಂಜೆ ಪಾರ್ಥಿವ ಶರೀರ ಬೆಂಗಳೂರಿಗೆ ಹೋಗಲಿದ್ದು, ನಾಳೆ ಸುಮನಹಳ್ಳಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ರಿಕ್ಕಿ, ಉಳಿದವರು ಕಂಡಂತೆ, ಕೆಜಿಎಫ್ ಚಾಪ್ಟರ್ 1, ಕೆಜಿಎಫ್ ಚಾಪ್ಟರ್ 2, 777 ಚಾರ್ಲಿ ಸೇರಿದಂತೆ ಹಲವು ಚಿತ್ರಗಳಲ್ಲಿ ದಿನೇಶ್ ಮಂಗಳೂರು ಅಭಿನಯಿಸಿದ್ದರು.
ಜಾಹೀರಾತು







































