ನಿಟ್ಟೆ: ದೇವ್ ರೆವ್ ಜಿಆರ್.ಎಐ.ಸಿಇ ಮಹಿಳಾ ಹ್ಯಾಕಥಾನ್ ನಲ್ಲಿ ನಿಟ್ಟೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

0

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಿಟ್ಟೆ ಕ್ಯಾಂಪಸ್ನಲ್ಲಿ ನಡೆದ ದೇವ್ ರೆವ್ ಕಂಪೆನಿಯ ನೇತೃತ್ವದ ಜಿಆರ್.ಎಐ.ಸಿಇ ಮಹಿಳಾ ಹ್ಯಾಕಥಾನ್ನಲ್ಲಿ ಉನ್ನತ ಗೌರವಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ಕಾರ್ಯಕ್ರಮದಲ್ಲಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಭವ್ಯಾ ನಾಯಕ್, ಕಂಪ್ಯೂಟರ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಚೈತ್ರಾ ಎಸ್. ನಾಯಕ್ ಮತ್ತು ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ ವಿಭಾಗದ ರಶ್ಮಿ ಎನ್. ರವರ ತಂಡ ಪ್ರಥಮ ಸ್ಥಾನ ಪಡೆದರೆ, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಅಮೂಲ್ಯ ಜಿ.ಆರ್ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ದೀತ್ಯ ಎಸ್ ಸಾಲಿಯಾನ್, ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಶ್ರಾವ್ಯ ಎ ಪ್ರಭುರವರ ತಂಡ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದೆ.

ವಿಜೇತರಿಗೆ ರೂ.60,000/-, ಪ್ರಥಮ ರನ್ನರ್ ಅಪ್ ಗೆ ರೂ.30,000/-, ಮತ್ತು ಎರಡನೇ ರನ್ನರ್ ಅಪ್ ಗೆ ರೂ.15,000/- ನಗದು ಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಯಿತು.

ನಿಟ್ಟೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಬೋಧಕರು ಮತ್ತು ವಿದ್ಯಾರ್ಥಿಗಳು ವಿಜೇತರನ್ನು ಅವರ ಗಮನಾರ್ಹ ಸಾಧನೆಗಾಗಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here