ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್.ಐ.ಟಿ.

0

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಮಂಗಳವಾರ ಸ್ಥಳ ಮಹಜರಿಗಾಗಿ ಸೌಜನ್ಯಾ ಪರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆದೊಯ್ದಿದ್ದಾರೆ.

ಸಾಕ್ಷಿದಾರನಾಗಿ ಆಗಮಿಸಿ ಈಗ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ ಹೇಳಿಕೆಯಂತೆ ಇಂದು ಪೊಲೀಸರು ಕೋರ್ಟ್‌ ಸರ್ಚ್‌ ವಾರಂಟ್‌ ಪಡೆದು ತಿಮರೋಡಿಗೆ ಆಗಮಿಸಿದ್ದಾರೆ.

ಎಸ್‌ಐಟಿ ಉತ್ಕನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಸುತ್ತಿರಲಿಲ್ಲ. ನನ್ನ ಮೊಬೈಲ್‌ ತಿಮರೋಡಿ ಕಡೆಯವರ ಜೊತೆ ಇತ್ತು ಎಂದು ಹೇಳಿದ್ದ.

ಈ ಕಾರಣಕ್ಕೆ ಚಿನ್ನಯ್ಯ ತಂಗಿದ್ದ ಕೊಠಡಿಯ ಮಹಜರು ಮತ್ತು ಮೊಬೈಲ್‌ ಸಂಗ್ರಹಿಸಲು ಪೊಲೀಸರು ತಿಮರೋಡಿ ನಿವಾಸಕ್ಕೆ ಆಗಮಿಸಿದ್ದಾರೆ.

   

LEAVE A REPLY

Please enter your comment!
Please enter your name here