Home ಕಾರ್ಕಳ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರಿಂದ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿ

ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರಿಂದ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿ

0

 

ರಾಜ್ಯ ಮಟ್ಟದ ಶೂಟಿಂಗ್ ಕ್ರೀಡಾಕೂಟದಲ್ಲಿ ತಮಿಳುನಾಡಿನ ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ ಕುತ್ತಿಗೆಗೆ ಪದಕ ಹಾಕಿಸಿಕೊಳ್ಳಲು ನಿರಾಕರಿಸಿ ಅದನ್ನು ಕೈಯಲ್ಲಿ ಪಡೆದುಕೊಂಡಿದ್ದಾರೆ. ಈ ಕುರಿತ ವೀಡಿಯೊ ವೈರಲ್ ಆಗಿದೆ.

ಶೂಟಿಂಗ್ ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಣ್ಣಾಮಲೈ ವಿಜೇತರಿಗೆ ಪದಕ ಹಾಕುತ್ತಿದ್ದರು. ಆದರೆ ಅಣ್ಣಾಮಲೈ ಪದಕ ಹಾಕಲು ಮುಂದಾದಾಗ ಸೂರ್ಯ ರಾಜ ಬಾಲು ನಿರಾಕರಿಸಿದ್ದಾರೆ.

ಇದಕ್ಕೂ ಮೊದಲು ತಿರುನಲ್ವೇಲಿಯ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಸಮಾರಂಭದಲ್ಲಿ ಸಂಶೋಧಕಿ ಜೀನ್ ಜೋಸೆಫ್ ರಾಜ್ಯಪಾಲ ಆರ್.ಎನ್. ರವಿಯವರಿಂದ ಡಾಕ್ಟರೇಟ್ ಪದವಿಯ ಪ್ರಮಾಣ ಪತ್ರ ಪಡೆಯಲು ನಿರಾಕರಿಸಿದ್ದರು.

ಜಾಹೀರಾತು

NO COMMENTS

LEAVE A REPLY

Please enter your comment!
Please enter your name here