
ಬಿಜೆಪಿಯ ಸಂಘಟನಾ ಪರ್ವದ ಅಂಗವಾಗಿ ಪಕ್ಷ ಸಂಘಟನೆಯ ವಿವಿಧ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಶಾಸಕರ ಮನೆಯಲ್ಲಿ ವಿಶೇಷ ಸಭೆ ನಡೆಯಿತು.
ಬಿಜೆಪಿ ಪಕ್ಷ ಸಂಘಟನೆ ಮತ್ತು ವಿವಿಧ ಶಕ್ತಿಕೇಂದ್ರ ಹಾಗೂ ಗ್ರಾಮ ಸಮಿತಿಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಿ ಯೋಜನೆ ರೂಪಿಸಲಾಯಿತು. ಗ್ರಾಮ ಪಂಚಾಯತ್ ಚುನಾವಣೆ ಮತ್ತು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧರಾಗುವಂತೆ ಮಾನ್ಯ ಶಾಸಕರು ಕಾರ್ಯಕರ್ತರಿಗೆ ಸೂಚನೆ ನೀಡಿದರು.
ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ಎಡಪಂಥೀಯರು ವ್ಯವಸ್ಥಿತ ಷಡ್ಯಂತ್ರ ರೂಪಿಸಿ ದಾಳಿ ನಡೆಸುತ್ತಿರುವ ಬಗ್ಗೆ ಮಾತನಾಡಿ ಈ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕು, ಹಾಗೂ ನಮ್ಮ ಸಮಾಜದಲ್ಲಿ ಕೂಡ ಜಾಗೃತಿ ಮೂಡಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಕ್ಷೇತ್ರಾಧ್ಯಕ್ಷ ನವೀನ್ ನಾಯಕ ಎಲ್ಲಾ ಶಕ್ತಿ ಕೇಂದ್ರ ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರುಗಳಿಂದ ಪ್ರಸ್ತುತ ಕಾರ್ಯಚಟುವಟಿಕೆಗಳ ಬಗ್ಗೆ ವರದಿ ಪಡೆದು ಮುಂದಿನ ಯೋಜನೆಗಳು ಹಾಗೂ ಅದನ್ನು ಕಾರ್ಯಗತಗೊಳಿಸುವ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಶಾಸಕ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ಮಹಾವೀರ್ ಹೆಗ್ಡೆ, ಜಯರಾಮ್ ಸಾಲಿಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪಕ್ಷದ ಪ್ರಮುಖರಾದ ಮಣಿರಾಜ್ ಶೆಟ್ಟಿ, ರವೀಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಬೋಳ ಸತೀಶ್ ಪೂಜಾರಿ, ಸುರೇಶ್ ಶೆಟ್ಟಿ ಶಿವಪುರ, ಕಾರ್ಯದರ್ಶಿಗಳಾದ ಪ್ರವೀಣ್ ಸಾಲಿಯಾನ್, ಕರುಣಾಕರ ಕೋಟ್ಯಾನ್, ಮಂಡಲ ಪದಾಧಿಕಾರಿಗಳು, ಶಕಿಕೇಂದ್ರ ಅಧ್ಯಕ್ಷರುಗಳು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಪ್ರಕೋಷ್ಠಾಗಳ ಪ್ರಮುಖರು ಹಾಗೂ ಪಕ್ಷದ ವಿವಿಧ ಗ್ರಾಮಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮಂಡಲ ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಕಾರ್ಯಕ್ರಮ ನಿರೂಪಿಸಿದರು.






































