
ವ್ಯಕ್ತಿಯೋರ್ವರು ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಮನೆಯಲ್ಲಿ ಮೃತಪಟ್ಟು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾರ್ಕಳದ ನಲ್ಲೂರು ಗ್ರಾಮದ ಹೊಸಮನೆ ಪೆರೆಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ರಘುರಾಮ (65) ಎಂದು ಗುರ್ತಿಸಲಾಗಿದೆ. ಇವರ ಮನೆಯವರು ಕಳೆದ 15 ವರ್ಷಗಳಿಂದ ಬೇರೆ ವಾಸವಾಗಿದ್ದು, ಇವರು ಮಾತ್ರ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಬಿ.ಪಿ., ಶುಗರ್, ಹರ್ನಿಯ ಸಮಸ್ಯೆಗೆ ಒಳಗಾಗಿದ್ದು, ಎಡಕಾಲಿಗೆ ಗ್ಯಾಂಗ್ರಿನ್ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಜಿಲ್ಲಾಸ್ಪತ್ರೆಯಲ್ಲಿ ಕಳೆದ ವಾರವಷ್ಟೇ ಚಿಕಿತ್ಸೆ ಪಡೆದಿದ್ದರು. ತದನಂತರದಲ್ಲಿ ಅರೋಗ್ಯ ಸಮಸ್ಯೆ ತೀವ್ರವಾಗಿ ಆ.25 ರಿಂದ 28 ರ ವರೆಗಿನ ಅವಧಿಯಲ್ಲಿ ಮೃತಪಟ್ಟಿದ್ದಾರೆ. ತೀವ್ರ ದುರ್ವಾಸನೆ ಬಂದ ಕಾರಣ ಸ್ಥಳೀಯರು ಮನೆ ಪರೀಕ್ಷಿಸಿದಾಗ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು







































