
ಗ್ಯಾರಂಟಿ ಸಮಾವೇಶವನ್ನು ಉದ್ಘಾಟಿಸಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು
ಪುರಸಭೆ ಹಾಗೂ ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಹಾಗೂ ಅದಾಲತ್
ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಆಶ್ರಯದಲ್ಲಿ ಕಾರ್ಕಳ ಪುರಸಭೆ ಮತ್ತು ಕುಕ್ಕುಂದೂರು ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಾವೇಶ ಮತ್ತು ಅದಾಲತ್ ಕಾರ್ಯಕ್ರಮವು ಸೆ.12 ರಂದು ಅಪರಾಹ್ನ 3.00 ಗಂಟೆಗೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಜರುಗಲಿದ್ದು, ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಸುನೀಲ್ ಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಆಶೋಕ್ ಕುಮಾರ್ ಕೊಡವೂರು, ಉಪಾದ್ಯಕ್ಷರಾದ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಾಳ ಅಜಿತ್ ಹೆಗ್ಡೆ, ಪುರಸಭೆಯ ಅಧ್ಯಕ್ಷರಾದ ಯೋಗೀಶ್ ದೇವಾಡಿಗ, ಕುಕ್ಕುಂದೂರು ಪಂಚಾಯತ್ ಅದ್ಯಕ್ಷೆ ಶ್ರೀಮತಿ ಉಷಾ ಹಾಗೂ ಇಲಾಖಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಯ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಸಮಾವೇಶದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷರಾದ ಮಾಳ ಅಜಿತ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












