
ಮಿಯ್ಯಾರಿನ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ ವಿದ್ಯಾರ್ಥಿನಿ ವಿನುತಾ ಇವರು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಟಾಪ್ 15 ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಿಂದ ನೀಡಲಾಗುವ ಒಂದು ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನ ಹಾಗೂ ಪ್ರತಿಭಾ ಪುರಸ್ಕಾರವನ್ನು ಸ್ವೀಕರಿಸಿದ ವಿದ್ಯಾರ್ಥಿಗಳಲ್ಲಿ ವಿನುತಾ ಒಬ್ಬರಾಗಿದ್ದಾರೆ. ವಿನುತಾ ವೈದ್ಯಕೀಯ ಕೋರ್ಸನ್ನು ಆಯ್ಕೆ ಮಾಡಿಕೊಂಡಿದ್ದು, ರಾಜ್ಯದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗೆ ದಾಖಲಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಉಡುಪಿ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿರುವ ರಶ್ಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್. ಲಮಾಣಿ, ಕಾಲೇಜಿನ ಪ್ರಾಂಶುಪಾಲರಾಗಿರುವ ಮಲ್ಲಿಕಾರ್ಜುನ ಕುರಿ, ಗಣಕ ವಿಜ್ಞಾನ ಉಪನ್ಯಾಸಕರು ಹಾಗೂ ನಿಲಯಪಾಲಕರಾದ ತುಳಸಿ ಗಾಯತ್ರಿದೇವಿ, ಭೌತಶಾಸ್ತ್ರ ಉಪನ್ಯಾಸಕರಾದ ಗಣೇಶ ಬರ್ಲಾಯ, ಅಂಗ್ಲ ಭಾಷಾ ಉಪನ್ಯಾಸಕರಾದ ಸುಪ್ರೀತ, ಕನ್ನಡ ಭಾಷಾ ಉಪನ್ಯಾಸಕರಾದ ಭರತ್‌ರಾಜ್ ಕೆ.ಎನ್., ಜೀವಶಾಸ್ತ್ರ ಉಪನ್ಯಾಸಕರಾದ ಸುಷ್ಮಾ ಹೆಗಡೆ, ರಸಾಯನಶಾಸ್ತ್ರ ಉಪನ್ಯಾಸಕರಾದ ಸಂಧ್ಯಾ ಆಚಾರ್ಯ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.












