
ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಜಂಟಿ ಅನುದಾನದಿಂದ ಗ್ರಾಮ ಪಂಚಾಯತ್ ಸಾಣೂರು ನಿರ್ಮಿಸಿ ಕೊಟ್ಟಿರುವ ಬಾಲಕಿಯರ ಶೌಚಾಲಯದ ಉದ್ಘಾಟನೆಯನ್ನು ಸಾಣೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಯುವರಾಜ್ ಜೈನ್ ಉದ್ಘಾಟಿಸಿದರು.
ಉದ್ಘಾಟನೆಯ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪೂರ್ವ ವಿದ್ಯಾರ್ಥಿಯಾಗಿದ್ದ ಭಾರತ ಪೆಟ್ರೋಲಿಯಂನ ವಿಶ್ರಾಂತ ಉದ್ಯೋಗಿ ರವಿದಾಸ್ ಭಟ್ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಮಾತಗಳನ್ನಾಡಿದರು.
ಸಾಣೂರು ಗ್ರಾಮ ಪಂಚಾಯತಿಯ ಸದಸ್ಯರಾದ ಪ್ರಸಾದ್ ಪೂಜಾರಿ ಅವರು ಮಾತನಾಡುತ್ತಾ, ವಿದ್ಯಾ ಸಂಸ್ಥೆಯ ಸರ್ವಾಂಗೀಣ ಪ್ರಗತಿಗೆ ಸಹಕರಿಸುವುದಾಗಿ ಹೇಳಿದರು.
ವಿವಿಧ ಸಂಘ ಸಂಸ್ಥೆಗಳು ನಡೆಸಿದ ಬೇರೆ ಬೇರೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ಕಲಿಯುವಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಸಾಣೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯನಿ ಲವೀನ ಮೇಲ್ವಿಟ, ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷ ಮಾಧವ ಭಂಡಾರ್ಕರ್, ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.












