
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದು ಮುಖ್ಯಮಂತ್ರಿ ಆಗಬೇಕೆಂದು ಕನಸು ಕಂಡಿರುವ ಸಚಿವ ಸತೀಶ್ ಜಾರಕಿಹೊಳಿ ಹೊಸ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಬೆಂಗಳೂರು ಸಮೀಪದ ಏರೋಡ್ರೋಮ್ ನಲ್ಲಿ ಶುಕ್ರವಾರ ನೂತನ ಹೆಲಿಕಾಪ್ಟರನ್ನು ಪರಿಶೀಲಿಸಿದ ಸಚಿವರು, ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂಬ ವಿಷಯವನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಸತೀಶ್ ಜಾರಕಿಹೊಳಿ ಉತ್ತರ ಕರ್ನಾಟಕದಲ್ಲಿ ಹೆಲಿಕ್ಯಾಪ್ಟರ್ ಹೊಂದಿರುವ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಕಾರಣರಾಗಿದ್ದಾರೆ.












