Tuesday, February 3, 2026
Google search engine
Homeಕಾರ್ಕಳಕ್ರೈಸ್ಟ್ ಕಿಂಗ್: ಈಜು ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್: ಈಜು ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಆರ್ಯನ್ ಕೋಟ್ಯಾನ್ ರಾಜ್ಯಮಟ್ಟಕ್ಕೆ ಆಯ್ಕೆ

 

ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ.ಪೂ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀ ಸ್ಟೈಲ್ ಮತ್ತು 400 ಮೀ ಫ್ರೀ ಸ್ಟೈಲ್‍ನಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಉಳಿದಂತೆ ಪ್ರಥಮ ವಿಜ್ಞಾನ ವಿಭಾಗದ ಸ್ಟೆಲಿಯೊಸ್ ಡಾರ್ವಿನ್ ತಾವ್ರೋ 1500 ಮೀ ಮತ್ತು 400 ಮೀ ಫ್ರೀ ಸ್ಟೈಲ್‍ನಲ್ಲಿ ತೃತೀಯ ಸ್ಥಾನ, ಪ್ರಥಮ ವಿಜ್ಞಾನ ವಿಭಾಗದ ಗಗನ್ ಭಟ್ 200 ಮೀ ಫ್ರೀ ಸ್ಟೈಲ್‍ನಲ್ಲಿ ದ್ವಿತೀಯ ಸ್ಥಾನ. 400*100ಮೀ ರಿಲೇಯಲ್ಲಿ ಆರ್ಯನ್, ಗಗನ್ ಭಟ್, ಸಾರ್ಥಕ್, ಸ್ಟೆಲಿಯೊಸ್ ಡಾರ್ವಿನ್ ತಾವ್ರೋ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments