
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮುದ್ರಾಡಿ ಮಂಜುನಾಥ ಪೂಜಾರಿ ನೇಮಕ.
ಬೆಂಗಳೂರು : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕ ಮುದ್ರಾಡಿ ಮಂಜುನಾಥ ಪೂಜಾರಿ ಅವರನ್ನು ಕಾಂಗ್ರೇಸ್ ಪಕ್ಷ ನೇಮಕ ಮಾಡಿದೆ.
ಯುವ ಕಾಂಗ್ರೆಸ್ ಮೂಲಕ ಸಮಾಜಸೇವೆ, ರಾಜಕೀಯ ಪ್ರವೇಶ ಮಾಡಿದ ಮಂಜುನಾಥ ಪೂಜಾರಿ ಅವರು ಮುದ್ರಾಡಿ ಗ್ರಾಮ ಪಂಚಾಯತಿ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಬಳಿಕ ಕಾರ್ಕಳ ತಾಲ್ಲೂಕು ಪಂಚಾಯತಿ ಸದಸ್ಯರಾಗಿದ್ದರು.
ಉಡುಪಿ ಜಿಲ್ಲಾ ಪಂಚಾಯತಿಯ ಹೆಬ್ರಿ ಕ್ಷೇತ್ರದ ಸದಸ್ಯರಾಗಿ ಸೇವೆ ಸಲ್ಲಿಸಿದರು. ಜನಪರ ಹೋರಾಟಗಾರರಾದ ಮುದ್ರಾಡಿ ಮಂಜುನಾಥ ಪೂಜಾರಿ ನಿರಂತರವಾಗಿ ಜನಸೇವೆಯಲ್ಲಿ ಸಕ್ರೀಯರಾಗಿದ್ದಾರೆ.ಸಾಮಾಜಿಕ, ಧಾರ್ಮಿಕ, ರಾಜಕೀಯ, ಶೈಕ್ಷಣಿಕ ಹಾಗೂ ಸಂಘಸಂಸ್ಥೆಗಳಲ್ಲಿ ಮುಖ್ಯಸ್ಥರಾಗಿ ಸೇವೆಸಲ್ಲಿಸುತ್ತ ಸಕ್ರೀಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾರ್ಕಳ ಕ್ಷೇತ್ರದ ಟಿಕೇಟ್ ಗಾಗಿ ಪ್ರಬಲ ಆಕಾಂಕ್ಷಿಯಾಗಿದ್ದರು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಲು ಶ್ರಮಿಸಿದ್ದಾರೆ. ಮುದ್ರಾಡಿಯಲ್ಲಿ ಶ್ರೀ ಗುರುರಕ್ಷಾ ಚಾರಿಟೇಬಲ್ ಟ್ರಸ್ಟ್ ಮತ್ತು ಶ್ರೀ ಗುರುರಕ್ಷಾ ಸೌಹಾರ್ದ ಸಹಕಾರಿ ಸಂಘವನ್ನು ಸ್ಥಾಪಿಸಿ ಜನಸೇವೆಯಲ್ಲಿ ಸಕ್ರೀಯರಾಗಿದ್ದಾರೆ. ಸಂಸ್ಥೆಯನ್ನು ಸ್ಥಾಪಿಸಿ ಮುದ್ರಾಡಿ ದಸರಾ ಹೆಸರಿನಲ್ಲಿ ನವರಾತ್ರಿ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸುತ್ತ ಬಂದಿದ್ದಾರೆ.












