Saturday, January 31, 2026
Google search engine
Homeಕಾರ್ಕಳಬಜ್ಪೆ:ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಹಿ.ಜಾ.ವೇ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

ಬಜ್ಪೆ:ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಹಿ.ಜಾ.ವೇ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

 

ಯುವತಿಯೋರ್ವಳನ್ನು ಅತ್ಯಾಚಾರಕ್ಕೆ‌ ಯತ್ನಿಸಿ ಆಕೆಯ ನಗ್ನ‌ ಫೊಟೊಗಳನ್ನು ಬಳಸಿ, ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ‌ ಮುಖಂಡ ಸಮಿತ್ ರಾಜ್ ವಿರುದ್ಧ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಇರುವೈಲು ಗ್ರಾಮದ ಯುವತಿಯೋರ್ವಳನ್ನು ಬೆದರಿಸಿ ಅತ್ಯಾಚಾರಕ್ಕೆ ಯತ್ನಿಸಿದಲ್ಲದೇ ಆಕೆಯ ಮೇಲೆ ನಿರಂತರ ಲೈಂಗಿಕ‌ ದೌರ್ಜನ್ಯವೆಸಗಿ ಫೊಟೊ ಇರುವುದಾಗಿ ಬೆದರಿಸುತ್ತಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ.

ಸಂತ್ರಸ್ತೆಯ ಸಹೋದರನಿಗೆ 2 ವರ್ಷದ ಹಿಂದೆ ಬಜ್ಪೆಯಲ್ಲಿ ಅಪಘಾತವಾಗಿ ಮಂಗಳೂರಿನ ವಿನಯ್ ಆಸ್ಪತ್ರೆಯಲ್ಲಿದ್ದ ಸಂದರ್ಭ ಸಂತ್ರಸ್ತೆಯ ಮನೆಯ ಆರ್ಥಿಕ ಪರಿಸ್ಥಿತಿ ಮತ್ತು ಮನೆಯ ಪರಿಸ್ಥಿತಿಯನ್ನು ಆಸ್ಪತ್ರೆಗೆ ಬಂದಿದ್ದ ಓರ್ವ ವ್ಯಕ್ತಿ ಗಮನಿಸಿ ಮೂಡುಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರವರ ಜೊತೆ ಒಳ್ಳೆಯ ಬಾಂಧವ್ಯ ಹೊಂದಿರುವ ಧರೆಗುಡ್ಡೆಯ ಸಮಿತ್ ರಾಜ್ ರವರ ಮೊಬೈಲ್ ನಂಬರ್ ಅನ್ನು ಕೊಟ್ಟು ಮಾತನಾಡಲು ಹೇಳಿದ್ದರು. ಅದರಂತೆ ಸಂತ್ರಸ್ತೆ ಆತನಿಗೆ ಫೋನ್ ಮಾಡಿ ಕಷ್ಟವನ್ನು ಹೇಳಿಕೊಂಡಿದ್ದಳು. ಬಳಿಕ ಮೂಡಬಿದ್ರೆ ಶಾಸಕರು ಆಸ್ಪತ್ರೆಗೆ ಬಂದು ಸಹಾಯ ಮಾಡಿದ್ದರು ಎಂದು‌ ತಿಳಿದು ಬಂದಿದೆ.

ಆ ಬಳಿಕ ಆರೋಪಿ ಸಮಿತ್ ರಾಜ್ ಪದೇ ಪದೇ ಸಂತ್ರಸ್ತೆಯ ಮೊಬೈಲ್ ಫೋನ್ ಗೆ ಕರೆ ಮಾಡಿ ಒಳ್ಳೆಯ ರೀತಿಯಲ್ಲಿ ಮಾತನಾಡಿ ನಂತರ ಯುವತಿಯನ್ನು ಪ್ರೀತಿ ಮಾಡುತ್ತಿದ್ದು, ಮದುವೆಯಾಗುವುದಾಗಿ ಹೇಳಿದ್ದ. ಇದರಿಂದ ಹೆದರಿದ ಯುವತಿ ಮನೆಯಲ್ಲಿ ಮಾತನಾಡುವಂತೆ ತಿಳಿಸಿದ್ದಳು ಎಂದು ಹೇಳಲಾಗಿದೆ.

ಈ ಕುರಿತು ಆರೋಪಿ ಸಮಿತ್ ರಾಜ್ ನೊಂದಿಗೆ ಮಾತನಾಡಿದ್ದ ಆಕೆಯ ತಾಯಿ ಸಣ್ಣ ವಯಸ್ಸಿಗೆ ಮದುವೆ ಮಾಡಿಸುವುದಿಲ್ಲ‌ ಎಂದು ಹೇಳಿದ್ದರು ಎನ್ನಲಾಗಿದೆ.

ಇದಾದ ಬಳಿಕವೂ ಆರೋಪಿಯು ಯುವತಿಗೆ ನಿರಂತರ ಫೊನ್‌ಕರೆಗಳನ್ನು ಮಾಡುತ್ತಿದ್ದು, ಕರೆ ಸ್ವೀಕರಿಸದಿದ್ದಾಗ ಕಾಲೇಜಿನ ಬಳಿ ಮತ್ತು ಮನೆ ಬಳಿ ಬರುವುದಾಗಿ ಬೆದರಿಸುತ್ತಿದ್ದ. ಹೀಗಾಗಿ ಆತನ ಒತ್ತಡಕ್ಕೆ ಮಣಿದು ಆತನೊಂದಿಗೆ ಇಷ್ಟ ಇಲ್ಲದಿದ್ದರೂ ಮಾತನಾಡುತ್ತಿದೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ ಎಂದು ತಿಳಿದು ಬಂದಿದೆ.

2023ರ ಮಾರ್ಚ್ 23ರಂದು ಕಾಲೇಜು ಬಿಟ್ಟು ಮನೆಗೆ ಬರುತ್ತಿದ್ದ ವೇಳೆ‌ ಆರೋಪಿಯು ಕಾರಿನಲ್ಲಿ ಬಂದು ಆಕೆಯನ್ನು ಕರೆದೊಯ್ದು, ಬಜ್ಪೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ಬಲಾತ್ಕಾರವಾಗಿ ಬಟ್ಟೆ ಬಿಚ್ಚಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಂದರ್ಭ ಜೋರಾಗಿ ಬೊಬ್ಬೆ ಹೊಡೆದಾಗ ಬಾಯಿಗೆ ಕೈ ಅಡ್ಡ ಇಟ್ಟು, ಈ ವಿಚಾರ ಯಾರಲ್ಲಾದರೂ ಹೇಳಿದರೆ ಮನೆಗೆ ಬಂದು ನನ್ನನ್ನು ಮತ್ತು ನನ್ನ ಮನೆಯವರನ್ನು ಕೊಲೆ‌ ಮಾಡುವುದಾಗಿ ಕೊಲೆ ಬೆದರಿಕೆ ಹಾಕಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಆ ಬಳಿಕ ಯುವತಿಯನ್ನು ಹಲವು ಬಾರಿ ಆತ ಹೊರಗೆ ಹೋಗಲು ಕರೆದೊಯ್ದು, ಹೋಗಲು ಒಪ್ಪದೇ ಇದ್ದಾಗ ನನ್ನ ಆಶ್ಲೀಲ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದ.‌ ಅಲ್ಲದೆ, ನನ್ನ ನಗ್ನ ಫೊಟೊಗಳನ್ನೂ ಕಳುಹಿಸುವಂತೆ ಒತ್ತಾಯಿಸಿದ ಕಾರಣ ನಾನು ನಗ್ನ ಫೊಟೊಗಳನ್ನೂ ಕಳುಹಿಸಿದ್ದೆ ಎಂದು ಸಂತ್ರಸ್ತೆ ಯುವತಿ ದೂರಿನಲ್ಲಿ ಮಾಹಿತಿ ನೀಡಿದ್ದಾಳೆ ಎಂದು ತಿಳಿದು ಬಂದಿದೆ.

ಈ ಕುರಿತು ಯುವತಿ ನೀಡಿದ ದೂರಿನಂತೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ‌ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments