
ವಿದ್ಯಾರ್ಥಿನಿಯರು ತಮ್ಮ ಸಮಸ್ಯೆಗಳಿಗೆ ‘ಯುವ ಸ್ಪಂದನ’ ಕೇಂದ್ರ ಸಂಪರ್ಕಿಸಿ, ಸಹಾಯ ತೆಗೆದುಕೊಳ್ಳಿ, ಪರಿಹಾರ ಕಂಡುಕೊಳ್ಳಿ ಎಂದು ಉಡುಪಿ ಯುವ ಸ್ಪಂದನ ಕೇಂದ್ರದ ಯುವ ಪರಿವರ್ತಕೆ ಸುನೀತಾ ತಿಳಿಸಿದರು.
ಇವರು ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಘಟಕ ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಪೋಕ್ಸೋ ಕಾಯಿದೆ ಹೇಗೆ ಸಹಾಯ ಮಾಡುತ್ತದೆ ಎಂದು ಮಾಹಿತಿ ನೀಡಿದರು. ಶಿಕ್ಷಣ,ವ್ಯಕ್ತಿತ್ವ ಬೆಳವಣಿಗೆ, ಸಂಬಧಗಳು, ಸುರಕ್ಷತೆ, ಲಿಂಗ, ಲಿಂಗತ್ವ, ಲೈಂಗಿಕತೆ, ಆರೋಗ್ಯ ಮತ್ತು ಜೀವನ ಶೈಲಿಯ ಬಗ್ಗೆ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೋ| ಗೀತಾ. ಜಿ. ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ನಿರ್ದೇಶಕಿ ವಿನುತಾ ಕಾಮತ್ ಅತಿಥಿಗಳನ್ನು ಪರಿಚಯಿಸಿ, ಎಲ್ಲರನ್ನು ಸ್ವಾಗತಿಸಿದರು.
ವಿದ್ಯಾರ್ಥಿ ನಾಯಕಿಯರಾದ ದಿಶಾ, ಸುಶ್ಮಿತಾ ಉಪಸ್ಥಿತರಿದ್ದರು. ಮಂಜುಳಾ ವಂದಿಸಿದರು. ಸಹನಾ ಕಾರ್ಯಕ್ರಮ ನಿರೂಪಿಸಿದರು.












