
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಕರಿಸುವಂತೆ ಶುಭದರಾವ್ ಮನವಿ
ರಾಜ್ಯ ಸರಕಾರ ಹಮ್ಮಿಕೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಕಳದಲ್ಲಿ ಪ್ರಾರಂಭವಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಶಾಲಾ ಶಿಕ್ಷಕರು ಮನೆ ಮನೆಗೆ ತೆರಳಿ ಕುಟುಂಬದ ಸದಸ್ಯರ ಮಾಹಿತಿ ಸಂಗ್ರಹಿಸುತ್ತಿದ್ದು, ಯಾವುದೇ ಗೊಂದಲಗಳಿಲ್ಲದೆ ತಮ್ಮ ಸೇವೆಯಲ್ಲಿ ಮುಂದುವರೆಯುತ್ತಿರುವುದು ಕಂಡು ಬಂದಿದೆ.
ಈ ಸಮೀಕ್ಷೆಯು ರಾಜ್ಯದ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು, ಸಮೀಕ್ಷೆಯ ಸಂದರ್ಭದಲ್ಲಿ ಕೇಳುವ ಸರಳ ಪ್ರಶ್ನೆಗಳಿಗೆ ಜನತೆ ಸೂಕ್ತ ಮಾಹಿತಿಯನ್ನು ಯಾವುದೇ ಅಂಜಿಕೆ ಇಲ್ಲದೆ ನೀಡುವ ಮೂಲಕ ಸರಕಾರದ ಈ ಜನಗಣತಿಗೆ












