ಕಾರ್ಕಳ: ಶಿರ್ಲಾಲಿನಲ್ಲಿ ಮಹಿಳೆಯೊರ್ವರ ಮನೆಗೆ ಗೋ ಕಳ್ಳರು ನುಗ್ಗಿ ಮಾರಕಾಸ್ತ್ರಗಳನ್ನು ತೋರಿಸಿ ಗೋ ಕಳ್ಳತನ ನಡೆಸಿರುವುದು ಅತ್ಯಂತ ಖಂಡನೀಯ.- ಯುವಮೊರ್ಚಾ ಕಾರ್ಕಳ ಅಧ್ಯಕ್ಷ ರಾಕೇಶ್‌ ಶೆಟ್ಟಿ

0

 

ಗೋ ಕಳ್ಳರ ಅಟ್ಟಹಾಸ ಮಿತಿ ಮೀರುತ್ತಿದೆ. ಹೈನುಗಾರಿಕೆ ನಡೆಸಿ ಜೀವ ನಡೆಸುತ್ತಿರುವ ಮಹಿಳೆಯ ಮನೆಯ ಹಟ್ಟಿಯಿಂದಲೇ ದನಗಳ ಕಳ್ಳತನ ನಡೆದಿದೆ. ಮಾತ್ರವಲ್ಲದೆ ಮಹಿಳೆಗೆ ಮಾರಕಾಸ್ತ್ರದಿಂದ ಬೆದರಿಸಿರುವುದು ಅತಂಕಕಾರಿ ಘಟನೆ. ಈ ರೀತಿ ಪೋಲಿಸರ ಭಯವಿಲ್ಲದೆ ಕಳ್ಳತನ ನಡೆಯುವುದನ್ನು ನೋಡಿದರೆ ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲವಾದ ಹಾಗೆ ತೋರುತ್ತಿದೆ.

ಈ ರೀತಿಯ ಘಟನೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದು, ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಕಳೆದುಕೊಂಡಂತಿದೆ. ಪರೋಕ್ಷವಾಗಿ ಪೊಲೀಸ್ ಇಲಾಖೆ ಬೆಂಬಲ ಈ ದುಷ್ಕರ್ಮಿಗಳಿಗೆ ಸಿಗುತ್ತಿದೆಯೋ ಎನ್ನುವ ಮಾತುಗಳು ಕೂಡ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿವೆ.

ಈ ರೀತಿಯ ಪ್ರಕರಣ ಕಾರ್ಕಳದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಆದರೆ ಪೋಲಿಸ್‌ ಇಲಾಖೆ ದನಗಳ್ಳರ ದುಷ್ಕೃತ್ಯಗಳಿಗೆ ಕಡಿವಾಣ ಹಾಕಲು ಸಂಪೂರ್ಣ ವಿಫಲರಾಗಿದ್ದಾರೆ. ಒಂದು ರೀತಿಯಲ್ಲಿ ರಾಜ್ಯ ಕಾಂಗ್ರೆಸ್ಸ್‌ ಸರ್ಕಾರದ ಓಲೈಕೆ ನೀತಿಯು ಗೋ ಕಳ್ಳರಿಗೆ ವರದಾನ ಆದಂತಿದೆ. ಈ ದುಷ್ಕೃತ್ಯದ ಹಿಂದಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸದಿದ್ದಲ್ಲಿ ಸಮಸ್ತ ಹಿಂದೂ ಸಮಾಜ ತಮ್ಮ ರಕ್ಷಣೆಗೆ ಬೀದಿಗಿಳಿದು ಪೊಲೀಸ್ ಠಾಣೆಯ ಮುಂದೆಯೇ ಪ್ರತಿಭಟಿಸುವ ಸಮಯ ಬರಬಹುದು ಎಂದು ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್‌ ಶೆಟ್ಟಿ ಕುಕ್ಕುಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

   

LEAVE A REPLY

Please enter your comment!
Please enter your name here