
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ರಜತ ವರ್ಷಾಚರಣೆಯ ಸಮಾರೋಪ ಸಮಾರಂಭದ ಪ್ರಯುಕ್ತ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಅಬ್ಬನಡ್ಕ ಸದಾಶಿವ ಪುತ್ರನ್ ಅವರ ಪ್ರಯೋಜಕತ್ವದಲ್ಲಿ ಉಚಿತ ಬರೆಯುವ ಪುಸ್ತಕ ಹಾಗೂ ಲೇಖನಾ ಸಾಮಾಗ್ರಿ ವಿತರಣೆ ಮಾಡಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಪ್ರಥ್ವೀರಾಜ್ ಬಲ್ಲಾಳ್, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಉಪಾಧ್ಯಕ್ಷ ಸತೀಶ್ ಅಬ್ಬನಡ್ಕ, ನಿಕಟ ಪೂರ್ವ ಕಾರ್ಯದರ್ಶಿ ವೀಣಾ ಹರೀಶ್ ಪೂಜಾರಿ, ಮಾಜಿ ಉಪಾಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಶಾಲಾ ಗೌರವ ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತಿತರಿದ್ದರು.












