ಕಂಚಿನಡ್ಕ ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ಕಾರ್ಕಳದಿಂದ 2000 ಬಿಜೆಪಿ ಕಾರ್ಯಕರ್ತರು ಭಾಗಿ-ನವೀನ್ ನಾಯಕ್
ಕಾರ್ಕಳ:ಕಾರ್ಕಳ-ಬೆಳ್ಮಣ್-ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ರಾಜ್ಯ ಸರ್ಕಾರ ಟೋಲ್ ಸಂಗ್ರಹಕ್ಕೆ ಆದೇಶ ಮಾಡಿರುವುದನ್ನು ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಪ್ರತಿ ಬಾರಿಯೂ ವಿರೋಧಿಸುತ್ತಾ, ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸುತ್ತಾ ಬಂದಿದೆ. ಆದರೂ ಕೂಡ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಭಾವನೆಗಳಿಗೆ ಬೆಲೆ ಕೊಡದೇ ಟೋಲ್ ಸಂಗ್ರಹಕ್ಕೆ ಮುಂದಾಗಿರುವುದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರವು ಜನಪರ ಸರ್ಕಾರ ಅಲ್ಲ, ಜನ ವಿರೋಧಿ ಸರ್ಕಾರ ಎಂದು ಸಾಭೀತಾಗಿದೆ.
ಟೋಲ್ ಸಂಗ್ರಹಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಆಗಸ್ಟ್ 24 ಶನಿವಾರದಂದು ನಂದಳಿಕೆ ಸುಹಾಸ್ ಹೆಗ್ಡೆ ನೇತೃತ್ವದ ಸ್ಥಳೀಯ ಟೋಲ್ ಸಂಗ್ರಹ ವಿರೋಧಿ ಹೋರಾಟ ಸಮಿತಿಯ ಬೃಹತ್ ಸಾರ್ವಜನಿಕ ಪ್ರತಿಭಟನೆ ಗೆ ಕರೆ ನೀಡಿದ್ದು, ಈ ಪ್ರತಿಭಟನೆಯಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಕಳದಿಂದ ಎರಡು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಾಹನ ಸವಾರರಿಗೆ ಬರ ಎಳೆಯಲು ಮುಂದಾಗಿರುವ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿರುವ ಬಿಜೆಪಿ ಪಕ್ಷವು ನಿರಂತರ ಜನರ ಪರವಾಗಿ ಕೆಲಸ ಮಾಡುವುದನ್ನು ಮುಂದುವರೆಸುತ್ತದೆ. ಈ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಕಾರ್ಕಳ ಮಂಡಲ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.