
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅನುಮೋದನೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ ರವಿಶಂಕರ್ ಶೇರಿಗಾರ್ ರವರನ್ನು ಹಿಂದುಳಿದ ವರ್ಗಗಳ ಅಧ್ಯಕ್ಷ ಎಸ್. ಮಧುಬಂಗಾರಪ್ಪ ನೇಮಕ ಮಾಡಿದ್ದಾರೆ.
ರವಿಶಂಕರ್ ಶೇರಿಗಾರ್ ರವರು ಕಳೆದ 25 ವರ್ಷಗಳಿಂದ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಕಾರ್ಕಳ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಪ್ರದಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
2013ರಿಂದ 2018ರವರೆಗೆ ಭಾರತೀಯ ನೈರುತ್ಯ ರೈಲ್ವೆಯ ಸಲಹಾ ಸಮಿತಿ ಸದಸ್ಯರಾಗಿ 2017ರ ಗೋವಾ ರಾಜ್ಯದ ಪೋಂಡ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾಗಿ, ಎಐಸಿಸಿಯಿಂದ ನೇಮಕಗೊಂಡು ಪಕ್ಷದ ಅಭ್ಯರ್ಥಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಮತ್ತು ಕೆಪಿಸಿಸಿ ಸಂಯೋಜಕರಾಗಿ ಕಾರ್ಯ ನಿರ್ವಹಿಸಿದ್ದರು.
ತನ್ನನ್ನು ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ಸಮಿತಿಗೆ ಪ್ರದಾನ ಕಾರ್ಯದರ್ಶಿ ಸ್ಥಾನಕ್ಕೆ ಶಿಫಾರಸ್ಸು ಮಾಡಿದ ಡಾ.ಎಂ.ವೀರಪ್ಪ ಮೊಯ್ಲಿ ಅವರಿಗೆ, ಸಹಕರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್, ಉದಯ್ ಕುಮಾರ್ ಮುನಿಯಾಲು ,ಮಂಜುನಾಥ್ ಪೂಜಾರಿ ಮುದ್ರಾಡಿ ಅವರಿಗೆ ರವಿಶಂಕರ ಶೇರಿಗಾರ್ ಅವರು ಕೃತಜ್ಞತೆ ತಿಳಿಸಿದ್ದಾರೆ.












