
ಯುವಪ್ರೇಮಿಗಳಿಬ್ಬರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಅಂಬಲಪಾಡಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಯುವತಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ಮೃತ ಯುವತಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17), ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ತಿಳಿದುಬಂದಿದೆ.
ನಗರ ಪೋಲಿಸ್ ಠಾಣೆಯ ಎಸ್.ಐ ಭರತೇಶ್, ಎ.ಎಸ್.ಐ ಪರಮೇಶ್ವರ್ ಕೆ, ಎ.ಎಸ್ ಐ ರಮೇಶ್, ಮುಖ್ಯ ಆರಕ್ಷಕ ಜಯಕರ್ ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಮೃತದೇಹಗಳನ್ನು ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.












