Home ಕಾರ್ಕಳ ಕಾರ್ಕಳದ ಮಾಜಿ ಶಾಸಕ ಹೆಬ್ರಿ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ : ಸಮಗ್ರ ತನಿಖೆಗೆ ಎಸ್‌ಪಿಗೆ...

ಕಾರ್ಕಳದ ಮಾಜಿ ಶಾಸಕ ಹೆಬ್ರಿ ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ : ಸಮಗ್ರ ತನಿಖೆಗೆ ಎಸ್‌ಪಿಗೆ ಮನವಿ

0

 

ಕಾರ್ಕಳದ ಮಾಜಿ ಶಾಸಕ ದಿವಂಗತ ಹೆಬ್ರಿ ಗೋಪಾಲ ಭಂಡಾರಿ ಅವರ ಪ್ರಥಮ ಪುತ್ರ 48 ರ ಸುದೀಪ್‌ ಭಂಡಾರಿ ಅವರು ಬ್ರಹ್ಮಾವರದ ಬಾರ್ಕೂರಿನಲ್ಲಿ ಅಕ್ಟೋಬರ್‌ 14ರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದಲ್ಲಿ ಹಲವು ಸಂಶಯ ಮೂಡಿದ್ದು ಸಮಗ್ರ ತನಿಖೆಯನ್ನು ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಿಗೆ ಮನವಿ ಮಾಡಿದೆ.

ಶೀಘ್ರ ತನಿಖೆ ನಡೆಸುವಂತೆ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್‌ ಅಧ್ಯಕ್ಷರಾದ ಹೆಬ್ರಿಯ ಮುಖಂಡ ನೀರೆ ಕೃಷ್ಣ ಶೆಟ್ಟಿಯವರು ಮನವಿ ಸಲ್ಲಿಸಿದ್ದಾರೆ.

ಹೆಬ್ರಿ ಗೋಪಾಲ ಭಂಡಾರಿ ಅವರ ಪ್ರಥಮ ಪುತ್ರನ ಸಾವು ಗೋಪಾಲ ಭಂಡಾರಿಯವರ ಅಭಿಮಾನಿಗೆ ಅತ್ಯಂತ ನೋವು ತಂದಿದೆ. ಅವರ ಕುಟುಂಬ, ಆತ್ಮೀಯರು ಹಾಗೂ ಸಂಬಂಧಿಗಳಿಗೆ ಚಿಂತೆ ಹಾಗೂ ಅಘಾತವಾಗಿದೆ. ಸುದೀಪ್‌ ಭಂಡಾರಿಯವರ ಮೊಬೈಲ್‌ ಎಲ್ಲಾ ಸಂಪರ್ಕಗಳ ವಿವಿಧ ಮೂಲಗಳನ್ನು ಸಮಗ್ರ ತನಿಖೆ ನಡೆಸಬೇಕು, ಆತ್ಮಹತ್ಯೆಗೆ ಕಾರಣ ಮತ್ತು ಕಾರಣರಾದವರನ್ನು ಪತ್ತೆ ಮಾಡಿ ಹೆಬ್ರಿ ಗೋಪಾಲ ಭಂಡಾರಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಶೀಘ್ರವಾಗಿ ನ್ಯಾಯ ದೊರಕಿಸಿಕೊಡುವಂತೆ ನೀರೆ ಕೃಷ್ಣ ಶೆಟ್ಟಿಯವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಾಹೀರಾತು    

NO COMMENTS

LEAVE A REPLY

Please enter your comment!
Please enter your name here