
ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಯುತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಪ್ರಥಮ ಚಿಕಿತ್ಸೆ ಕಾರ್ಯಕ್ರಮವು ಜರುಗಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎ.ವಿ.ಬಾಳಿಗಾ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ| ಕಾವ್ಯ.ಟಿ ಆಗಮಿಸಿ, ವಿದ್ಯಾರ್ಥಿನಿಯರಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಗೀತಾ. ಜಿ ಯವರು ವಹಿಸಿದ್ದರು.
ರೆಡ್‌ಕ್ರಾಸ್ ಯೋಜನಾಧಿಕಾರಿ ಕು.ಸೋನಾ ಇವರು ಸ್ವಾಗತಿಸಿದರು. ವೇದಿಕೆಯಲ್ಲಿ ರೆಡ್‌ಕ್ರಾಸ್ ನಾಯಕಿಯರಾದ ಅನನ್ಯ, ಲಾವಣ್ಯ ಉಪಸ್ಥಿತರಿದ್ದರು. ಕು. ನಯನ ವಂದಿಸಿ, ಕು. ಅಮೂಲ್ಯ ಕಾರ್ಯಕ್ರಮ ನಿರೂಪಿಸಿದರು.














