
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ 26ನೇ ಮತ್ತು 27ನೇ ವರ್ಷದ ನೂತನ ಅಧ್ಯಕ್ಷರಾಗಿ ಸುರೇಶ್ ಅಬ್ಬನಡ್ಕ ಹಾಗೂ ಕಾರ್ಯದರ್ಶಿಯಾಗಿ ಸತೀಶ್ ಅಬ್ಬನಡ್ಕ ಅವರು ಅವಿರೋಧವಾಗಿ ಸಂಘದ 25ನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ಸಂಚಾಲಕರಾಗಿ ಸಂದೀಪ್ ವಿ. ಪೂಜಾರಿ ಅಬ್ಬನಡ್ಕ, ಸ್ಥಾಪಕಾಧ್ಯಕ್ಷರಾಗಿ ವಿಠಲ ಮೂಲ್ಯ, ಗೌರವಾಧ್ಯಕ್ಷರಾಗಿ ರಾಜು ಶೆಟ್ಟಿ ಕುಂಟಲಗುಂಡಿ, ನಿಕಟ ಪೂರ್ವಾಧ್ಯಕ್ಷರಾಗಿ ದಿನೇಶ್ ಪೂಜಾರಿ ಬೀರೊಟ್ಟು, ಉಪಾಧ್ಯಕ್ಷರಾಗಿ ರಘುವೀರ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ ಆಚಾರ್ಯ ಬೋಳ, ಕೋಶಾಧಿಕಾರಿಯಾಗಿ ಪ್ರದೀಪ್ ಸುವರ್ಣ ಕೆಮ್ಮಣ್ಣು, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷರಾಗಿ ಕೀರ್ತನ್ ಪೂಜಾರಿ, ಗೌರವಾಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಅಶ್ವಿನಿ ಬೋಳ, ಕಾರ್ಯದರ್ಶಿಯಾಗಿ ಶ್ರದ್ಧಾ ಪೂಜಾರಿ, ಅಬ್ಬನಡ್ಕ ಚೆಂಡೆ ಬಳಗದ ಅಧ್ಯಕ್ಷರಾಗಿ ಯೋಗೀಶ್ ಆಚಾರ್ಯ ಬೋಳ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ ಸಹಾಯ ಸಂಘದ ಅಧ್ಯಕ್ಷರಾಗಿ ಪುಷ್ಪ ಕುಲಾಲ್, ಕಾರ್ಯದರ್ಶಿಯಾಗಿ ಅಶ್ವಿನಿ ಪ್ರಭಾಕರ್ ಆಯ್ಕೆಯಾಗಿದ್ದಾರೆ.
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

            










