
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 26ನೇ ವರ್ಷದ ವರ್ಷಾಚರಣೆ ಅಂಗವಾಗಿ ಕಾರ್ಕಳದ ಶೇಷಾದ್ರಿ ನಗರದ ಶ್ರೀ ವೆಂಕಟರಮಣ ಗೋಶಾಲೆಗೆ ಬೈಹುಲ್ಲು ಕೊಡುಗೆ ಹಸ್ತಾಂತರಿಸಲಾಯಿತು.
ಗೋವುಗಳು ಮನುಷ್ಯನ ಅವಿಭಾಜ್ಯ ಅಂಗವಾಗಿದೆ. ಜೀವನ ಪರ್ಯಂತ ನಮಗೆ ಹಾಲುಣಿಸುವ ಗೋಮಾತೆಗೆ ನಾವು ಅಭಾರಿಯಾಗಿ ಬದುಕಬೇಕಾಗಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಗೋಶಾಲೆಗೆ ಬೈಹುಲ್ಲು ಹಸ್ತಾಂತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷರಾದ ದಿನೇಶ್ ಪೂಜಾರಿ ಬಿರೋಟ್ಟು, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷ ಕೀರ್ತನ್ ಪೂಜಾರಿ, ಗೌರವಾಧ್ಯಕ್ಷ ರಾಜೇಶ್ ಕೋಟ್ಯಾನ್, ಕಾರ್ಯದರ್ಶಿ ಶ್ರದ್ಧಾ, ಜೊತೆ ಕಾರ್ಯದರ್ಶಿ ಸ್ಪೂರ್ತಿ, ಸಂಘದ ಸದಸ್ಯರಾದ ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ, ಪುಷ್ಪ ಕುಲಾಲ್, ಅನ್ನಪೂರ್ಣ ಕಾಮತ್, ಕಿರಣ್ ಬೋಳ, ಸುಭಾಸ್ ಕೆಮ್ಮಣ್ಣು ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.












