
ಜೋಡುರಸ್ತೆ ಬಳಿ ಕಾರು ಡಿಕ್ಕಿಯಾದ ಪರಿಣಾಮ ಪಾದಚಾರಿ ಸಾವನ್ನಪ್ಪಿದ್ದ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಜೋಡುರಸ್ತೆ ನಿವಾಸಿ ಮಹಾಬಲ ಮೊಯ್ಲಿ(86) ಎಂದು ಗುರ್ತಿಸಲಾಗಿದ್ದು, ಮೃತರು ಹಿರ್ಗಾನ ಕಡೆಯಿಂದ ಜೋಡುರಸ್ತೆಯಲ್ಲಿರುವ ತನ್ನ ಮನೆ ಕಡೆಗೆ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬಡಿದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಾಬಲ ಮೊಯ್ಲಿಯವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಪ್ರತ್ಯಕ್ಷದರ್ಶಿ ಉದಯ ಎಂಬವರು ನೀಡಿದ ದೂರಿನ ಅನ್ವಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












